Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಸ್ಟ್ರೇಲಿಯ-ಭಾರತ ಏಕದಿನ ಸರಣಿಗೆ ವೇತನ...

ಆಸ್ಟ್ರೇಲಿಯ-ಭಾರತ ಏಕದಿನ ಸರಣಿಗೆ ವೇತನ ಬಿಕ್ಕಟ್ಟಿನ ಕರಿಛಾಯೆ?

ವಾರ್ತಾಭಾರತಿವಾರ್ತಾಭಾರತಿ2 July 2017 10:25 PM IST
share
ಆಸ್ಟ್ರೇಲಿಯ-ಭಾರತ ಏಕದಿನ ಸರಣಿಗೆ ವೇತನ ಬಿಕ್ಕಟ್ಟಿನ ಕರಿಛಾಯೆ?

ಹೊಸದಿಲ್ಲಿ, ಜು.2: ಕ್ರಿಕೆಟ್ ಆಸ್ಟ್ರೇಲಿಯ(ಸಿಎ) ಹಾಗೂ ಆಸ್ಟ್ರೇಲಿಯದ ಅಗ್ರ ಕ್ರಿಕೆಟಿಗರ ನಡುವೆ ಉದ್ಭವಿಸಿರುವ ವೇತನ ವಿವಾದ ಸುಖಾಂತ್ಯ ಕಾಣದಿದ್ದರೆ ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯ ತಂಡ ಭಾರತ ಪ್ರವಾಸವನ್ನು ಬಹಿಷ್ಕರಿಸುವ ಸಾಧ್ಯತೆಯಿದೆ ಎಂದು ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.

ರವಿವಾರ ಸಿಡ್ನಿ ಹೊಟೇಲ್‌ನಲ್ಲಿ ತುರ್ತು ಸಭೆ ಸೇರಿದ ಆಸ್ಟ್ರೇಲಿಯ ಆಟಗಾರರು ಈ ತಿಂಗಳಾಂತ್ಯದಲ್ಲಿ ದಕ್ಷಿಣ ಆಫ್ರಿಕ ಎ ತಂಡದ ವಿರುದ್ಧದ ಸರಣಿಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ನೂತನ ಪರಿಷ್ಕೃತ ವೇತನ ಜಾರಿಗೆ ಸಂಬಂಧಿಸಿ ಸಂಸ್ಥೆಯ ಜ್ಞಾಪನಾಪತ್ರಕ್ಕೆ ಸಮ್ಮತಿ ಲಭಿಸಿದ ಬಳಿಕವಷ್ಟೇ ದಕ್ಷಿಣ ಆಫ್ರಿಕಕ್ಕೆ ಪ್ರಯಾಣಿಸಲು ಆಸ್ಟ್ರೇಲಿಯ ಎ ತಂಡಕ್ಕೆ ಆಯ್ಕೆಯಾಗಿರುವ ಆಟಗಾರರು ನಿರ್ಧರಿಸಿದ್ದಾರೆ.

ಈ ಹಿಂದಿನ ಜ್ಞಾಪನಾಪತ್ರದ ಅವಧಿ ಶುಕ್ರವಾರ ಮಧ್ಯರಾತ್ರಿ ಕೊನೆಗೊಂಡಿದ್ದು, ದೇಶದ ಸುಮಾರು 230 ಪ್ರಮುಖ ಕ್ರಿಕೆಟಿಗರು ನಿರುದ್ಯೋಗಿಗಳಾಗಿದ್ದಾರೆ.

ನಾವು ಪ್ರವಾಸ ಕೈಗೊಳ್ಳುವ ಉದ್ದೇಶಹೊಂದಿಲ್ಲ. ಏಕೆಂದರೆ ಶುಕ್ರವಾರದ ತನಕ ದೇಶದಿಂದ ಹೊರ ಹೋಗದಿರಲು ನಿರ್ಧರಿಸಿದ್ದೇವೆ. ಆಟಗಾರರು ಶಿಬಿರಕ್ಕೆ ತೆರಳಿ ಯೋಜನೆ ರೂಪಿಸಲಿದ್ದು, ಜ್ಞಾಪನಾಪತ್ರಕ್ಕೆ ಸಂಬಂಧಿಸಿ ಚರ್ಚೆ ನಡೆಸಲಿದ್ದೇವೆ. ಆದಾಯ ಹಂಚಿಕೆ ಮಾದರಿ ವಿಷಯಕ್ಕೆ ಸಂಬಂಧಿಸಿ ಮಹತ್ವದ ತಿರುವು ಸಿಗಬೇಕಾದ ಅಗತ್ಯವಿದೆ ಎಂದು ಆಸ್ಟ್ರೇಲಿಯ ಕ್ರಿಕೆಟ್ ಆಟಗಾರರ ಸಂಸ್ಥೆಯ ಮುಖ್ಯ ಅಧಿಕಾರಿ ಅಲಿಸ್ಟೈರ್ ನಿಕೋಲ್ಸನ್ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆಸ್ಟ್ರೇಲಿಯ ಕ್ರಿಕೆಟಿಗರ ಸಂಸ್ಥೆ(ಎಸಿಎ) ಹಾಗೂ ಕ್ರಿಕೆಟ್ ಆಸ್ಟ್ರೇಲಿಯ ನಡುವೆ ಮಹತ್ವದ ಬೆಳವಣಿಗೆ ನಡೆಯದೇ ಇದ್ದರೆ ಆಸ್ಟ್ರೇಲಿಯ ತಂಡ ಆಗಸ್ಟ್‌ನಲ್ಲಿ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿಲ್ಲ.

ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಗೆ ಮೊದಲು ಆಸ್ಟ್ರೇಲಿಯ ತಂಡ ಭಾರತಕ್ಕೆ ಪ್ರವಾಸ ಕೈಗೊಳ್ಳಲಿದೆ. ಭಾರತ ಪ್ರವಾಸ ರದ್ದಾದರೆ ಆಸ್ಟ್ರೇಲಿಯ ಕ್ರಿಕೆಟಿಗೆ ಆರ್ಥಿಕವಾಗಿ ಭಾರೀ ನಷ್ಟವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X