ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂಗೆ 25 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ , ಜು.3: ಕಲ್ಬುರ್ಗಿಯ ಅಳಂದಾದಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಕಾಮಗಾರಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಅವರಿಗೆ ಸುಪ್ರೀಂ ಕೋರ್ಟ್ 25 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಪರಿಕಲ್ಪನೆಯ ದುರುಪಯೋಗ ಎಂದಿರುವ ಜ. ದೀಪಕ್ ಮಿಶ್ರಾ ನೇತೃತ್ವದ ಪೀಠ ಅಬ್ರಹಾಂಗೆ ಈ ಭಾರೀ ದಂಡ ವಿಧಿಸಿದೆ. ಕಲ್ಬುರ್ಗಿಯ ಅಳಂದಾದಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಕಾಮಗಾರಿ ಪ್ರಶ್ನಿಸಿ ಅಬ್ರಹಾಂ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್ ಈ ಆದೇಶ ನೀಡಿದೆ.
Next Story





