Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಕ್ತದ ಮಡುವಿನಲ್ಲಿ ಬಿದ್ದು ಸಹಾಯ...

ರಕ್ತದ ಮಡುವಿನಲ್ಲಿ ಬಿದ್ದು ಸಹಾಯ ಯಾಚಿಸುತ್ತಿದ್ದ ಮಹಿಳೆಯ ವಿಡಿಯೋ ಮಾಡಿದ ಜನರು!

ಡಿಜಿಟಲ್ ಯುಗದಲ್ಲಿ ನಶಿಸುತ್ತಿರುವ ಮನುಷ್ಯತ್ವ

ವಾರ್ತಾಭಾರತಿವಾರ್ತಾಭಾರತಿ3 July 2017 5:41 PM IST
share
ರಕ್ತದ ಮಡುವಿನಲ್ಲಿ ಬಿದ್ದು ಸಹಾಯ ಯಾಚಿಸುತ್ತಿದ್ದ ಮಹಿಳೆಯ ವಿಡಿಯೋ ಮಾಡಿದ ಜನರು!

ಜಿಂದ್ (ಹರ್ಯಾಣ)ಜು.3: ಮಾನವ ಡಿಜಿಟಲ್ ಯುಗದಲ್ಲಿದ್ದಾನೆ, ಆದರೆ ಮನುಷ್ಯತ್ವ ಮಾತ್ರ ನಶಿಸುತ್ತಿದೆ. ಜಿಂದ್‌ನ ಬರೋಲಿ ಗ್ರಾಮದಲ್ಲಿ ನಡೆದಿರುವ ಘಟನೆ ಇದಕ್ಕೊಂದು ಅಪ್ಪಟ ನಿದರ್ಶನವಾಗಿದೆ. ಗರಗಸದಿಂದ ಗಂಡ ನಡೆಸಿದ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಮನೆಯ ಹೊರಗೆ ರಕ್ತದ ಮಡುವಲ್ಲಿ ಬಿದ್ದಿದ್ದ ಮೂವರು ಮಕ್ಕಳ ತಾಯಿ ನೆರವಿಗಾಗಿ ಬೊಬ್ಬೆ ಹೊಡೆಯುತ್ತಿದ್ದರೆ ನೆರೆಕರೆಯವರು ಆಕೆಯ ನೆರವಿಗೆ ಧಾವಿಸುವ ಬದಲು ಆ ದೃಶ್ಯವನ್ನು ತಮ್ಮ ಮೊಬೈಲ್‌ಗಳಲ್ಲಿ ಚಿತ್ರೀಕರಿಸುತ್ತಿದ್ದರು!

ಗಾಯಗೊಂಡ ಮಹಿಳೆ ಸಂಜು ಈಗ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಳಾದರೂ ಆಕೆ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವಿಡಿಯೋವನ್ನು  ಆನ್‌ಲೈನ್‌ನಲ್ಲಿ ಸಹಸ್ರಾರು ಜನರು ವೀಕ್ಷಿಸಿದ್ದಾರೆ. ‘‘ನಾನು ಸಾಯುತ್ತಿದ್ದೇನೆ, ಯಾರಾದರೂ ನನಗೆ ನೆರವಾಗಿ’ ಎಂದು ಸಂಜು ಸಾವಿನ ಭೀತಿಯಿಂದ ಆಕ್ರಂದನ ಮಾಡುವ ವೀಡಿಯೊ ಎಂಥವರ ಮನಸ್ಸನ್ನೂ ಕಲಕುತ್ತದೆ.

ಶುಕ್ರವಾರ ಈ ಘಟನೆ ನಡೆದಿದೆ. ಸಂಜು ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ಮರಳಿದಾಗ ಗಂಡ ನರೇಶ ಮದ್ಯ ಸೇವಿಸುತ್ತಿದ್ದ. ಒಳಗೆ ಪ್ರವೇಶಿಸುತ್ತಿದ್ದಂತೆಯೇ ಆಕೆಯ ಕಣ್ಣಿಗೆ ಖಾರದ ಪುಡಿ ಎರಚಿದ ಆತ ಎರಡು ಅಡಿ ಉದ್ದದ ಗರಗಸದಿಂದ ಆಕೆಯ ಹೊಟ್ಟೆ, ಭುಜ ಮತ್ತು ಮೊಳಕಾಲಿಗೆ ಹಲ್ಲೆ ನಡೆಸಿದ್ದ. ಅಲ್ಲಿಂದ ಪರಾರಿಯಾಗುವ ಮುನ್ನ ಕೊಲ್ಲುವುದಾಗಿ ಜೀವ ಬೆದರಿಕೆಯನ್ನೂ ಒಡ್ಡಿದ್ದ.

ಪೊಲೀಸರು ಬಂದು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸುವವರೆಗೂ ಸುಮಾರು ಒಂದು ಗಂಟೆ ಕಾಲ ಸಂಜು ರಕ್ತದ ಮಡುವಿನಲ್ಲಿಯೇ ಬಿದ್ದಿದ್ದಳು ಮತ್ತು ನೆರೆಕರೆಯವರು ತಮ್ಮ ಮೊಬೈಲ್‌ನಲ್ಲಿ ಆ ದೃಶ್ಯದ ವೀಡಿಯೊ ತೆಗೆಯುತ್ತಲೇ ಇದ್ದರು. ಪತ್ನಿ ತನಗೆ ಮೋಸ ಮಾಡಿದ್ದಾಳೆಂದು ಆರೋಪಿಸಿ ಈ ಕೃತ್ಯವೆಸಗಿದ ನರೇಶನನ್ನು ಪೊಲೀಸರು ಬಂಧಿಸಿದ್ದಾರೆ.

ಗಂಡನಿಂದ ಕಿರುಕುಳದ ವಿರುದ್ಧ ಸಂಜು ಈ ಹಿಂದೆ ಪೊಲೀಸರಿಗೆ ದೂರನ್ನೂ ನೀಡಿದ್ದಳು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X