ರಸ್ತೆ ಅಪಘಾತ: ಕಾರು ಚಾಲಕ ಮೃತ್ಯು

ಬೆಂಗಳೂರು, ಜು. 3: ಕಾರಿನ ಟೈರ್ ಸಿಡಿದು ಕ್ಯಾಂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕಾರು ಚಾಲಕ ಡಾಬಸ್‌ಪೇಟೆ ನಿವಾಸಿ ಸಾದಿಕ್ ಪಾಶ (20) ಮೃತರು ಎಂದು ಪೊಲೀಸರು ತಿಳಿಸಿದ್ದಾರೆ.
ಡಾಬಸ್‌ಪೇಟೆಯಿಂದ ತುಮಕೂರು ಕಡೆ ಹೋಗುತ್ತಿದ್ದ ವೇಳೆ ಕಾರಿನ ಮುಂಭಾಗದ ಟೈರ್ ಸಿಡಿದು ಚಾಲಕನ ನಿಯಂತ್ರಣ ತಪ್ಪಿದೆ. ಬಳಿಕ ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದು ತುಮಕೂರು ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಲಾರಿಗೆ ಢಿಕ್ಕಿ ಹೊಡೆದು ಈ ಅವಘಡ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
Next Story





