ವೇಶ್ಯಾವಾಟಿಕೆ ದಂಧೆ: ಮಹಿಳೆ ಸೇರಿ ಮೂವರ ಬಂಧನ
ಬೆಂಗಳೂರು, ಜು.4: ನಡೆಸುತ್ತಿದ್ದ ಆರೋಪದ ಮೇಲೆ ಮಹಿಳೆ ಸೇರಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ನಗರದ ವಸಂತಭಾಯಿ, ವೀರೇಶ್, ಸತೀಶ್ ಬಂಧಿತ ಆರೋಪಿಗಳಾಗಿದ್ದು, ಪ್ರಕರಣದಲ್ಲಿ ತೊಡಗಿದ್ದ ಮತ್ತೊಬ್ಬ ಆರೋಪಿ ಜೆ.ಕರುಣಾಕರನ್ ಎಂಬಾತ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅನ್ನಪೂರ್ಣೇಶ್ವರಿನಗರ ಸರಹದ್ದಿನ ಬಿಡಿಎ ಲೇಔಟ್ 7ನೆ ಬ್ಲಾಕ್, 3ನೆ ಬಿ ಕ್ರಾಸ್, ಈಶ್ವರಿ ನಿಲಯದಲ್ಲಿ ಯುವತಿಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ವೇಶ್ಯಾವಾಟಿಕೆಗೆ ಬಳಸಿಕೊಂಡಿದ್ದ ಯುವತಿಯೊಬ್ಬಳನ್ನು ಪೊಲೀಸರು ರಕ್ಷಣೆ ಮಾಡಲಾಗಿದ್ದು, ಆರೋಪಿಗಳಿಂದ ಮೂರು ಮೊಬೈಲ್, 10 ಸಾವಿರ ರೂ.ನಗದು ವಶಕ್ಕೆ ಪಡೆದು ಇಲ್ಲಿನ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
Next Story