ಉಡುಪಿ: ಜಿಲ್ಲಾ ಸಮಗ್ರ ಅಭಿವೃದ್ದಿ ಸಭೆ

ಉಡುಪಿ, ಜು.4: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನಿರ್ದೇಶನದಂತೆ ಉಡುಪಿ ಜಿಲ್ಲಾ ಸಮಗ್ರ ಅಭಿವೃದ್ದಿ ಕುರಿತ ಸಭೆ ಮಂಗಳವಾರ ಮಣಿಪಾಲ ದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯ ಮೀನುಗಾರಿಕೆ, ಯುವ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಕರಾರಸಾ ನಿಗಮದ ಅಧ್ಯಕ್ಷ ಹಾಗೂ ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ, ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಅದ್ಯಕ್ಷ ಎಂ.ಎ.ಗಪೂರ್, ವಿಧಾನಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಟಿ.ಬಾಲಕೃಷ್ಣ , ಅಪರ ಜಿಲ್ಲಾಧಿಕಾರಿ ಅನುರಾಧ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





