ಕಳವು ಪ್ರಕರಣ: ಆರೋಪಿ ಸೆರೆ
ಬೆಳ್ತಂಗಡಿ, ಜು.4: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣದಲ್ಲಿ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಕಳೆದ ಕೆಲ ವರ್ಷಗಳ ಹಿಂದೆ ನಾರಾವಿ ಸೂರ್ಯನಾರಾಯಣ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣದಲ್ಲಿ ದಾವಣಗೆರೆಯ ಚಂದ್ರಶೇಖರಪ್ಪ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ಆರೋಪಿ ಜಾಮೀನಿನ ಮೂಲಕ ಹೊರಬಂದು ತಲೆಮರೆಸಿಕೊಂಡಿದ್ದ. ಯಾವುದೋ ಪ್ರಕರಣ ಸಂಬಂಧ ಹೊನ್ನಳ್ಳಿ ಪೊಲೀಸರು ಈತನನ್ನು ಬಂಧಿಸಿ ಜೈಲಿಗಟ್ಟಿದ್ದರು. ವೇಣೂರು ಪೊಲೀಸರು ಈತನ ಮೇಲೆ ಬಾಡಿವಾರೆಂಟ್ ತಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
Next Story





