ಮೂರುವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು, ಜು.4: ಶಾಲಾ ಬಸ್‌ನಲ್ಲಿ ಯುಕೆಜಿ ಮಗುವಿನ ಮೇಲೆ ಬಸ್ ಚಾಲಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಬೆಂಗಳೂರಿನ ಆಗ್ನೇಯ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಒಡಿಸ್ಸಾ ಮೂಲದ ಅಶುತೋಶ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದಲ್ಲಿರುವ ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ ಯುಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂರೂವರೆ ವರ್ಷದ ಮಗು, ಸೋಮವಾರ ಎಂದಿನಂತೆ ಶಾಲೆಗೆ ತೆರಳಿ ಮನೆಗೆ ವಾಪಾಸ್ಸಾಗುತ್ತಿದ್ದಾಗ ಅದೇ ಶಾಲೆಯ ಬಸ್‌ನ ಚಾಲಕ ಅಶುತೋಷ್ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಬೆದರಿಸಿದ್ದಾನೆ ಎನ್ನಲಾಗಿದೆ.
ಈ ವಿಚಾರವನ್ನು ಮಗು ಪೋಷಕರಿಗೆ ತಿಳಿಸಿದಾಗ ಆತಂಕಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಬಂಡೇಪಾಳ್ಯ ಠಾಣೆ ಪೊಲೀಸರು, ಆರೋಪಿಯನು್ನ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಸದ್ಯ ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ವೈದ್ಯಕೀಯ ವರದಿಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವುದು ಸಾಬೀತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.