ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ
ಮಂಗಳೂರು, ಜು. 4: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಗಾಂಜಾ ಸಮೇತ ಕಂಕನಾಡಿ ನಗರ ಠಾಣಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಬೊಂದೇಲ್ ನಿವಾಸಿ ಶೈಲೇಶ್ ಶೆಟ್ಟಿ (25) ಹಾಗೂ ಜಲ್ಲಿಗುಡ್ಡೆಯ ಚಂದು ಯಾನೆ ವೆಂಕಟೇಶ್ (35) ಬಂಧಿತ ಆರೋಪಿಗಳು.
ಶಕ್ತಿನಗರದ ಬಳಿ ಗಾಂಜಾ ಇಟ್ಟುಕೊಂಡು ಗಿರಾಕಿಗಳನ್ನು ಕಾಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೂರು ಪ್ಯಾಕೇಟ್ ಗಾಂಜಾ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





