ಮೃತದೇಹ ಪತ್ತೆ
ಕಾಪು, ಜು.2: ತಲೆನೋವಿನಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮಣಿಪುರ ಸೇತುವೆಯಿಂದ ಹೊಳೆಗೆ ಹಾರಿ ನಾಪತ್ತೆಯಾಗಿರುವ ಉಡುಪಿ ವಾದಿರಾಜ ರಸ್ತೆಯ ನಿವಾಸಿ ಪ್ರಕಾಶ್ ಪೈ (54) ಎಂಬವರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.
ಉಡುಪಿಯ ಎಲ್‌ಐಸಿ ಮುಖ್ಯ ಶಾಖೆಯಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಇವರು ಜು. 2ರಂದು ಮಣಿಪುರ ಸೇತುವೆಯಲ್ಲಿ ಕಾರು ನಿಲ್ಲಿಸಿ ಮರಣಪತ್ರ ಬರೆದು ಹೊಳೆಗೆ ಹಾರಿ ನಾಪತ್ತೆಯಾಗಿದ್ದರು. ಕಳೆದ ಎರಡು ದಿನಗಳಿಂದ ಇವರ ಪತ್ತೆಗಾಗಿ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಮೀನುಗಾರರು ಮಣಿಪುರ, ಪಡುಕೆರೆ ಭಾಗಗಳಲ್ಲಿ ಹುಡುಕಾಟ ನಡೆಸುತ್ತಿದ್ದರು.
ಇಂದು ಹುಡುಕಾಟ ನಡೆಸುತ್ತಿದ್ದ ವೇಳೆ ಬೆಳಗ್ಗೆ 10ಗಂಟೆ ಸುಮಾರಿಗೆ ಉದ್ಯಾವರ ಪಡುಕೆರೆಯಲ್ಲಿ ಪ್ರಕಾಶ್ ಪೈ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





