Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜು.8ರಿಂದ ಸಾವಯವ-ಸಿರಿಧಾನ್ಯ ಮೇಳ

ಜು.8ರಿಂದ ಸಾವಯವ-ಸಿರಿಧಾನ್ಯ ಮೇಳ

ವಾರ್ತಾಭಾರತಿವಾರ್ತಾಭಾರತಿ5 July 2017 5:30 PM IST
share

ಬೆಂಗಳೂರು, ಜು. 5: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾವಯವ ಉತ್ಪನ್ನಗಳ ಹಾಗೂ ಸಿರಿಧಾನ್ಯಗಳ ಬಗ್ಗೆ ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೃಷಿ ಇಲಾಖೆ ಜೈವಿಕ್ ಕೃಷಿಕ್ ಸೋಸೈಟಿ ಆಶ್ರಯದಲ್ಲಿ ಜು.8 ಮತ್ತು 9ರಂದು ನಾಗರಬಾವಿ ಮೈದಾನದಲ್ಲಿ ಸಾವಯವ-ಸಿರಿಧಾನ್ಯ ಮೇಳವನ್ನು ಆಯೋಜಿಸಲಾಗಿದೆ.

ರೈತರು ಬೆಳೆದ ಗುಣಮಟ್ಟದ ಸಾವಯವ ಮತ್ತು ಸಿರಿಧಾನ್ಯ ಉತ್ಪನ್ನಗಳನ್ನು ತಮ್ಮ ನೋಂದಾಯಿತ ಸಂಘಗಳ ಮೂಲಕ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಈ ಮೇಳ ಅನುವು ಮಾಡಿಕೊಡಲಿದೆ. ಗ್ರಾಹಕರು ವಿವಿದ ರೀತಿಯ ಸಾವಯವ ಮತ್ತು ಸಿರಿಧಾನ್ಯ ಪದಾರ್ಥಗಳನ್ನು ಒಂದೆ ಸ್ಥಳದಲ್ಲಿ ಖರೀದಿಸಬಹುದು.

ಸಾವಯವ ಮತ್ತು ಸಿರಿಧಾನ್ಯ ಪದಾರ್ಥಗಳ ಗುಣಮಟ್ಟದ ಬಗ್ಗೆ ನೇರವಾಗಿ ಉತ್ಪಾದಕರು ಹಾಗೂ ಸರಬರಾಜುದಾರರೊಂದಿಗೆ ವಿಚಾರ ವಿನಿಮಯಕ್ಕೂ ಇಲ್ಲಿ ಅವಕಾಶವಿದೆ. ಈ ಮೇಳವನ್ನು ಕೃಷಿ ಸಚಿವ ಕೃಷ್ಣ ಭೈರೇಗೌಡ ಉದ್ಘಾಟಿಸಲಿದ್ದು, ವಸತಿ ಸಚಿವ ಎಂ.ಕೃಷ್ಣಪ್ಪ ಮಾರಾಟ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ.

ಶಾಸಕ ಪ್ರಿಯಾಕೃಷ್ಣ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ಸಾವಯವ ಕೃಷಿ ಉನ್ನತ ಮಟ್ಟದ ಸಮಿತಿ ಅಧ್ಯಕ್ಷ ಸೋಮಶೇಖರ್ ಪಾಲ್ಗೊಳ್ಳಲಿದ್ದಾರೆ. ಮೇಳದಲ್ಲಿ ಊದಲು ಪಿಜ್ಜಾ, ರಾಗಿ ಕೇಕ್, ಬರಗು ಸಮೋಸ, ಸಾಮೆ ಅಣಬೆ ಬಿರಿಯಾನಿ, ನವಣೆ ಕಟ್‌ಲೆಟ್, ನವಣೆ ಬ್ರೆಡ್, ಜೋಳದ ಜೀರಾ ಲಸ್ಸಿ, ನವಣೆ ಪೊಂಗಲ್, ಹಾರಕ ಬಿಸಿಬೇಳೆಬಾತ್, ಸಾಮೆ ಪಾಯಸ, ಸಜ್ಜೆ ರೊಟ್ಟಿ, ಸಾಮೆ ಚೌಚೌಬಾತ್ ಸೇರಿದಂತೆ ಹಲವು ಖಾದ್ಯಗಳನ್ನು ಸವಿಯಬಹುದು.


ಸಿರಿಧಾನ್ಯಗಳ ಖಾದ್ಯ ತಯಾರಿಕಾ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳಿಂದ ತಯಾರಾದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ, ಹೈಡ್ರೋಫೋನಿಕ್ಸ್ ಮತ್ತು ಟೆರೇಸ್ ಗಾರ್ಡನಿಂಗ್ ಬಗ್ಗೆ ಪ್ರಾತ್ಯಕ್ಷಿಕೆ, ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ ಮೇಳದ ಪ್ರಮುಖ ಆಕರ್ಷಣೆಗಳಾಗಿರಲಿವೆ. ಪ್ರವೇಶ ಉಚಿತವಾಗಿದ್ದು ಎರಡೂ ದಿನಗಳ ಕಾಲ ಬೆಳಗ್ಗೆ 9 ಗಂಟೆಯಿಂದ ಸಂಜೆ 6:30ರ ವರೆಗೆ ಮೇಳ ನಡೆಯಲಿದೆ.
ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಹಣಾ ಅಧಿಕಾರಿ ಜೈವಿಕ್ ಕೃಷಿ ಸೊಸೈಟಿ ಎಚ್.ಆರ್.ಗುರುದತ್-94481 82516 ಅಥವಾ ಕೃಷಿ ಸಹಾಯಕ ನಿರ್ದೇಶಕ ಮಂಜಪ್ಪ- ಮೊಬೈಲ್-82779 29921 ಅನ್ನು ಸಂಪರ್ಕಿಸಲು ಪ್ರಕಟಣೆ ಕೋರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X