ಐಜಿಪಿ, ಎಸ್ಪಿ, ಕಮಿಷನರ್ ಆಸ್ಪತ್ರೆಗೆ ಭೇಟಿ
ಚೂರಿ ಇರಿತ ಪ್ರಕರಣ
ಮಂಗಳೂರು, ಜು.5: ದುಷ್ಕರ್ಮಿಗಳಿಂದ ದಾಳಿಗೊಳಗಾಗಿ ಗಂಭೀರ ಸ್ಥಿತಿಯಲ್ಲಿರುವ ಆರೆಸೆಸ್ ಕಾರ್ಯಕರ್ತ ಶರತ್ ದಾಖಲಾಗಿರುವ ನಗರದ ಖಾಸಗಿ ಆಸ್ಪತ್ರೆಗೆ ಬುಧವಾರ ಐಜಿಪಿ ಹರಿಶೇಖರನ್, ಎಸ್ಪಿ ಸುಧೀರ್ ರೆಡ್ಡಿ ಮತ್ತು ಕಮಿಷನರ್ ಟಿ.ಆರ್.ಸುರೇಶ್ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಐಜಿಪಿ ಹರಿಶೇಖರನ್, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ ಬಂಧಿಸಲಾಗುವುದು ಎಂದು ಭರವಸೆ ನೀಡಿದರು.
ಮಂಗಳವಾರ ರಾತ್ರಿ ದುಷ್ಕರ್ಮಿಗಳು ಶರತ್ ಮೇಲೆ ದಾಳಿ ನಡೆಸಿದ್ದಾರೆ. ಬಂಟ್ವಾಳದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಹಾಗೂ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಐಜಿಪಿ ತಿಳಿಸಿದರು.
ವಿಶೇಷ ತಂಡ ರಚನೆ: ಶರತ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಐಜಿಪಿ ತಿಳಿಸಿದರು.
Next Story





