ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ
ಮಂಗಳೂರು, ಜು.5: ಕಲೆ, ಕ್ರೀಡೆ, ಸಂಗೀತ, ಸಮಾಜ ಸೇವೆ ಮತ್ತು ಸಾಂಸ್ಕೃತಿಕ ಚಟುವಟಿಕೆ, ತಾರ್ಕಿಕ (Schlostic) ಸಾಧನೆಗಳು, ಹಾಗೂ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ (Innovation) ಮುಂತಾದ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ 2017-18ನೆ ಸಾಲಿನಲ್ಲಿ ಪ್ರಶಸ್ತಿಯನ್ನು ನೀಡಬೇಕಾಗಿದೆ.
ಮೇಲ್ಕಂಡ ಪ್ರತಿ ಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ, ಒಟ್ಟು 14 ಮಕ್ಕಳನ್ನು ಆಯ್ಕೆ ಮಾಡಿ, ಆಯ್ಕೆಯಾದ ಪ್ರತಿ ಮಗುವಿಗೆ ತಲಾ ರೂ.10,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು.
ಅರ್ಜಿ ಸಲ್ಲಿಸುವ ಮಕ್ಕಳ ವಯಸ್ಸು 5 ರಿಂದ 18 ವರ್ಷದೊಳಗಿರಬೇಕು. ಜನನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಲ್ಪಟ್ಟಿರ ಬೇಕು. ಈ ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳಿಗೆ ಪುನಃ ಪ್ರಶಸ್ತಿ ನೀಡಲು ಅವಕಾಶರುವುದಿಲ್ಲ.ಈ ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರತಕ್ಕದ್ದು. ಅಸಾಧಾರಣವೆಂದು ಇವರ ಸಾಧನೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಒದಗಿಸಬೇಕು.
ಪ್ರಸ್ತಾವನೆಯನ್ನು ನಿಗದಿತ ನಮೂನೆಯಲ್ಲಿ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್ ಅಶೋಕ ನಗರ ಅಂಚೆ, ದ.ಕ. ಮಂಗಳೂರು- 575006 ಇವರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನ ಜು.19. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2451254, 2453071ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.