ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ರೋಷನ್ ಬೇಗ್ ನೇಮಕ

ಬೆಂಗಳೂರು, ಜು. 5: ನಗರಾಭಿವೃದ್ಧಿ ಸಚಿವ ಆರ್.ರೋಷನ್ ಬೇಗ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನಿಯೋಜನೆ ಮಾಡಿ ಸರಕಾರ ಆದೇಶ ಹೊರಡಿಸಲಾಗಿದೆ.
ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಾ.ಜಿ.ಪರಮೇಶ್ವರ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಹಿನ್ನೆಲೆಯಲ್ಲಿ ಸಚಿವ ಆರ್.ರೋಷನ್ ಬೇಗ್ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಬುಧವಾರ ಸರಕಾರ ಆದೇಶ ಹೊರಡಿಸಿದೆ.
Next Story





