ಐಸಿಜೆಯಲ್ಲಿ ಪಾಕ್ ಏಜಂಟ್ ಆಗಿ ಅಟಾರ್ನಿ ಜನರಲ್

ಇಸ್ಲಾಮಾಬಾದ್, ಜು. 6: ಭಾರತ ರಾಷ್ಟ್ರೀಯ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಪಾಕಿಸ್ತಾನದ ಅಟಾರ್ನಿ ಜನರಲ್ ಅಶ್ತರ್ ಔಸಫ್ ಅಲಿ ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ)ದಲ್ಲಿ ಆ ದೇಶದ ಏಜಂಟ್ ಆಗಿರುತ್ತಾರೆ ಎಂದು ಸ್ಥಳೀಯ ಮಾಧ್ಯಮಗಳು ಗುರುವಾರ ವರದಿ ಮಾಡಿವೆ.
ಭಾರತೀಯ ಗುಪ್ತಚರ ಸಂಸ್ಥೆ ‘ರಾ’ದ ಪರವಾಗಿ ಬಲೂಚಿಸ್ತಾನದಲ್ಲಿ ಬೇಹುಗಾರಿಕೆ ನಡೆಸುತ್ತಿರುವ ಆರೋಪದಲ್ಲಿ ಜಾಧವ್‌ರನ್ನು ಬಂಧಿಸಿದ ಬಳಿಕ, ಪಾಕಿಸ್ತಾನದ ಸೇನಾ ನ್ಯಾಯಾಲಯವೊಂದು ಅವರಿಗೆ ಮರಣ ದಂಡನೆ ವಿಧಿಸಿದೆ.
ಈ ಶಿಕ್ಷೆಯನ್ನು ಪ್ರಶ್ನಿಸಿ ಭಾರತ ಹೇಗ್‌ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದ ಕದ ತಟ್ಟಿದೆ.
Next Story





