Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ರೇಲ್ ಭಯೋತ್ಪಾದಕ ರಾಷ್ಟ್ರ: ಪಿಣರಾಯಿ

ಇಸ್ರೇಲ್ ಭಯೋತ್ಪಾದಕ ರಾಷ್ಟ್ರ: ಪಿಣರಾಯಿ

ಪ್ರಧಾನಿ ಮೋದಿಯ ಇಸ್ರೇಲ್ ಭೇಟಿಗೆ ಕೇರಳ ಸಿಎಂ ತೀವ್ರ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ6 July 2017 7:46 PM IST
share
ಇಸ್ರೇಲ್ ಭಯೋತ್ಪಾದಕ ರಾಷ್ಟ್ರ: ಪಿಣರಾಯಿ

ತಿರುವನಂತಪುರಂ, ಜು.6: ಭಯೋತ್ಪಾದಕರು ಎಂಬ ಆರೋಪದಲ್ಲಿ ಅಮಾಯಕ ಜನರನ್ನು ಹತ್ಯೆ ಮಾಡಿರುವ ಇಸ್ರೇಲ್ ಜೊತೆ ಪ್ರಧಾನಿ ನರೇಂದ್ರ ಮೋದಿ ಮೈತ್ರಿಗೆ ಮುಂದಾಗಿರುವುದು ನಾಚಿಕೆಗೇಡು ಎಂದು ಟೀಕಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಭಾರತೀಯರು ಸದಾ ಫೆಲೆಸ್ತೀನ್ ಜನತೆಯೊಂದಿಗಿದ್ದಾರೆ ಎಂದು ಹೇಳಿದ್ದಾರೆ.

    ಅಮಾಯಕರನ್ನು ಕೊಂದ ದೇಶದೊಂದಿಗೆ ಭಯೋತ್ಪಾದಕತೆ ನಿಗ್ರಹ ಒಪ್ಪಂದ ಮಾಡಿಕೊಂಡಿರುವುದು ಅತಾರ್ಕಿಕ ಕ್ರಮವಾಗಿದೆ. ಭಾರತೀಯರ ಹೃದಯವು ಫೆಲೆಸ್ತೀನ್‌ನಲ್ಲಿ ಇಸ್ರೇಲ್ ನಡೆಸಿದ ಅಮಾನುಷ ಕೃತ್ಯದ ವಿರುದ್ಧವಿದೆ ಎಂದವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. ತಮ್ಮದೇ ನೆಲದಲ್ಲಿ ಸ್ವತಂತ್ರವಾಗಿ ಬದುಕಲು ಪೆಲೆಸ್ತೀನ್ ಜನತೆ ನಡೆಸಿದ ಹೋರಾಟವನ್ನು ನಿರ್ದಯವಾಗಿ ಹತ್ತಿಕ್ಕಿದ ಇಸ್ರೇಲ್ ಕ್ರಮಕ್ಕೆ ಭಾರತದ ವಿರೋಧವಿದೆ ಎಂದವರು ಹೇಳಿದ್ದಾರೆ.

  ಅವರ ಹೇಳಿಕೆಯ ಸಾರಾಂಶ ಹೀಗಿದೆ: ಅಮಾಯಕ ಜನರನ್ನು ಹತ್ಯೆ ಮಾಡಿದ ಭಯೋತ್ಪಾದಕ ದೇಶದೊಂದಿಗೆ ಭಯೋತ್ಪಾದಕ ನಿಗ್ರಹ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂಬ ವಿಶ್ಲೇಷಣೆ ತಮಾಷೆ ಎಂದು ಪರಿಗಣಿಸಲಾಗದು. ಪ್ರಧಾನಿ ಮೋದಿಯವರ ಇಸ್ರೇಲ್ ಭೇಟಿಯನ್ನು ‘ಇಸ್ರೇಲ್‌ನ ಜಾಗತಿಕ ಸಲಹೆಗಾರರ ಜೊತೆ ಒಂದು ವ್ಯೆಹಾತ್ಮಕ ಪಾಲುದಾರಿಕೆ’ ಹಾಗೂ ಅಮೆರಿಕ-ಇಸ್ರೇಲ್-ಭಾರತ ಜೊತೆಗೂಡಿದ ಒಂದು ವ್ಯೆಹಾತ್ಮಕ ಪಾಲುದಾರಿಕೆ ಎಂದು ರೂಪಾಂತರಿಸಲಾಗಿದೆ.

  ಆದರೆ ಫೆಲೆಸ್ತೀನ್ ಜನತೆ ತಮ್ಮದೇ ನೆಲದಲ್ಲಿ ಸ್ವತಂತ್ರವಾಗಿ ಬದುಕಲು ನಡೆಸುತ್ತಿರುವ ಹೋರಾಟಕ್ಕೆ ಬಹುದೊಡ್ಡ ಬೆದರಿಕೆಯಾದ ಇಸ್ರೇಲ್ ವಿರುದ್ಧ ಭಾರತೀಯರ ಮನಸ್ಥಿತಿಯಿದೆ. ಯೆಹೂದಿವಾದವು ಯೆಹೂದಿಗಳ ನಾಡಿನಲ್ಲಿ ಯೆಹೂದಿಗಳ ಅಭಿವೃದ್ಧಿಯನ್ನು ಮಾತ್ರ ಹೇಳುತ್ತಿಲ್ಲ, ಇದು ಫೆಲೆಸ್ತೀನನ್ನು ಸರ್ವನಾಶ ಮಾಡಲು ಬಯಸುತ್ತಿದೆ. ಇದನ್ನು ಅರಿತಿರುವ ಭಾರತೀಯರು ಫೆಲೆಸ್ತೀನ್ ಪ್ರತಿಭಟನೆಯ ಪರವಾಗಿಯೇ ಇದ್ದಾರೆ.
 ಫೆಲೆಸ್ತೀನಿಯರಿಗೆ ಪೌರತ್ವ ನಿರಾಕರಿಸುತ್ತಿರುವ ಇಸ್ರೇಲ್ ವಿಶ್ವಸಂಸ್ಥೆಯ ನಿರ್ಣಯ ಮತ್ತು ಅಂತಾರಾಷ್ಟ್ರೀಯ ಸಮುದಾಯದ ಆಗ್ರಹವನ್ನು ಬದಿಗೊತ್ತಿ ಜನಾಂಗಬೇಧ ನೀತಿಯನ್ನು ಮುಂದುವರಿಸಿದೆ. ಸಂಘಪರಿವಾರದ ಚಿಂತನೆಯ ಪರಿಣಾಮ ನಾವಿಂದು ಇಸ್ರೇಲ್ ಸೇನೆಯ ಕೋವಿಯ ಬೆಂಕಿಯೆದುರು ನಿಂತಿದ್ದೇವೆ. ಮೋದಿ-ನೆತನ್ಯಾಹು ಜಂಟಿ ಹೇಳಿಕೆಯ ಐಕ್ಯಮತ್ಯವು ಸಂಘಪರಿವಾರ ಮತ್ತು ಯೆಹೂದಿ ಚಿಂತನೆಯ ಐಕ್ಯಮತ್ಯವಾಗಿದೆ. ನಿರಂಕುಶ ಅಧಿಕಾರ, ದ್ವೇಷತ್ವಕ್ಕೆ ಒಮ್ಮತ ದೊರೆತಿದೆ ಎಂದು ಪಿಣರಾಯಿ ಅಭಿಪ್ರಾಯಪಟ್ಟಿದ್ದಾರೆ.

   ಇಸ್ರೇಲ್‌ನ ಆಕ್ರಮಣಶೀಲತೆಯನ್ನು ನಿರ್ಲಕ್ಷಿಸಿ ಮೋದಿಯವರ ಇಸ್ರೇಲ್ ಭೇಟಿಯ ಬಗ್ಗೆ ಭಾರೀ ಸಂಭ್ರಮಾಚರಣೆ ನಡೆದಿದೆ. ಫೆಲೆಸ್ತೀನ್ ಪ್ರಾಧಿಕಾರದ ಕೇಂದ್ರ ಸ್ಥಳವಾದ ರಮದಮಕ್ಕೆ ಭೇಟಿ ನೀಡದ ಮೋದಿಯವರ ನಡೆ ಅವರಿಗೆ ಯೆಹೂದಿವಾದದ ಕುರಿತು ಇರುವ ಸಹಾನುಭೂತಿಯ ಪ್ರತೀಕವಾಗಿದೆ ಹಾಗೂ ಈ ಮೂಲಕ ಇಸ್ರೇಲ್ ನಡೆಸಿದ ಮಾನವ ಹಕ್ಕು ಉಲ್ಲಂಘನೆಯ ಪ್ರಕರಣಗಳನ್ನು ಪರೋಕ್ಷವಾಗಿ ಬೆಂಬಲಿಸಿದಂತಾಗಿದೆ. ಭಾರತದೊಂದಿಗೆ ಶಸ್ತ್ರಾಸ್ತ್ರ ಮಾರಾಟ ಒಪ್ಪಂದ ಮಾಡಿಕೊಂಡಿರುವ ಇಸ್ರೇಲ್ ಶಸ್ತ್ರಾಸ್ತ್ರ ಮಾರಾಟದಿಂದ ದೊರೆತ ಹಣವನ್ನು ಫೆಲೆಸ್ತೀನ್ ಜನರನ್ನು ದಮನಿಸುವ ಕಾರ್ಯಕ್ಕೆ ಬಳಸಲಿದೆ. ಆಕ್ರಮಿಸಿಕೊಂಡ ದೇಶದ ಜನರನ್ನು ಗುಳೆಹೋಗುವಂತಹ ಸಂಕಟಕ್ಕೆ ದೂಡುವ ಈ ಪ್ರಕ್ರಿಯೆ ಜನರನ್ನು ತೀವ್ರ ತಲ್ಲಣಗೊಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X