ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಗ್ಗೆ 8ಕ್ಕೆ ಪ್ರಾರಂಭ

ಬೆಂಗಳೂರು, ಜು.6: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬೋಧಿಸುತ್ತಿರುವ ತರಗತಿಗಳನ್ನು ಆಡಳಿತಾತ್ಮಕ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪ್ರತಿದಿನ ಬೆಳಗ್ಗೆ 8ಕ್ಕೆ ಪ್ರಾರಂಭಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚಿಸಿದೆ.
ಈ ಕುರಿತು ಎಲ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ಸುತ್ತೋಲೆ ಹೊರಡಿಸಿರುವ ಶಿಕ್ಷಣ ಇಲಾಖೆ ಬೆಳಗ್ಗೆ 8ಕ್ಕೆ ಪ್ರಾರಂಭಿಸಿ 3.30ಕ್ಕೆ ಮುಗಿಸುವಂತೆ ಆದೇಶಿಸಲಾಗಿದೆ. ಹಾಗೂ ಕಾಲೇಜುಗಳಲ್ಲಿರುವ ಗ್ರಂಥಾಲಯಗಳನ್ನು ಬೆಳಗ್ಗೆ 10ರಿಂದ 5.30ವರೆಗೆ ತೆರೆದಿರುವಂತೆ ಸೂಚಿಸಲಾಗಿದೆ.
Next Story





