Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತನಿಖಾ ಸಮಿತಿ ರಚನೆಗೆ ಬಿಜೆಪಿ ಆಗ್ರಹ

ತನಿಖಾ ಸಮಿತಿ ರಚನೆಗೆ ಬಿಜೆಪಿ ಆಗ್ರಹ

​‘ವಿದ್ಯುತ್ ಉಪಕರಣಗಳ ಖರೀದಿಯಲ್ಲಿ ನಷ್ಟ’

ವಾರ್ತಾಭಾರತಿವಾರ್ತಾಭಾರತಿ6 July 2017 8:36 PM IST
share
ತನಿಖಾ ಸಮಿತಿ ರಚನೆಗೆ ಬಿಜೆಪಿ ಆಗ್ರಹ

ಬೆಂಗಳೂರು, ಜು.6: 2004 ರಿಂದ 2008ರ ತನಕ 692 ವಿದ್ಯುತ್ ಪರಿವರ್ತಕ(ಟಿಸಿ ಕಂಡಕ್ಟರ್ ಇತ್ಯಾದಿ) ಉಪಕರಣಗಳನ್ನು ಖರೀದಿಸಲಾಗಿದ್ದು, ಅವುಗಳನ್ನು 2012ರ ತನಕವೂ ಉಪಯೋಗಿಸದೇ ಇರುವುದು ಸದನ ಸಮಿತಿಗೆ ನೀಡಿರುವ ವರದಿಯಲ್ಲಿ ತಿಳಿಸಲಾಗಿದೆ ಎಂದು ಬಿಜೆಪಿ ಶಾಸಕ ಶಾಸಕರಾದ ಬಸವರಾಜ ಬೊಮ್ಮಾಯಿ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಈ ಸಂಬಂಧ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ಗೆ ಜು.4ರಂದು ಪತ್ರ ಬರೆದಿರುವ ಶಾಸಕರು, ಕಾಲಮಿತಿಯಲ್ಲಿ ಉಪಕರಣಗಳನ್ನು ಉಪಯೋಗಿಸದೇ ಇರುವುದರಿಂದ ಇದು ಆರ್ಥಿಕ ಹೊರೆಗೆ ಕಾರಣವಾಗಿದೆ. ತಕ್ಷಣ ಉಪಕರಣಗಳನ್ನು ಉಪಯೋಗಿಸಿದ್ದರೆ ಗುಣಮಟ್ಟದ ಕೆಲಸವಾಗುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ, ಸರಕಾರಕ್ಕೆ ಆರ್ಥಿಕ ನಷ್ಟವೂ ಆಗುತ್ತಿರಲಿಲ್ಲ. ಆದುದರಿಂದ, ಈ ವಿಷಯವನ್ನು ತನಿಖೆಗೆ ಒಳಪಡಿಸಲು ವಿಶೇಷ ತನಿಖಾ ಸಮಿತಿ ರಚಿಸಿ, ಸರಕಾರಕ್ಕೆ ಹಾನಿಯಾಗಿರುವ ಪ್ರಮಾಣ ಎಷ್ಟು ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಶಾಸಕರು ಮನವಿ ಮಾಡಿದ್ದಾರೆ.

ಬಿಜೆಪಿ-ಜೆಡಿಎಸ್ ಕಾದಾಟಕ್ಕೆ ವೇದಿಕೆ: ಇಂಧನ ಇಲಾಖೆಯಲ್ಲಿನ ಅವ್ಯವಹಾರ ಕುರಿತು ತನಿಖೆ ನಡೆಸಲು ಸಮಿತಿಯನ್ನು ರಚಿಸುವಂತೆ ಕೋರಿ ಬಿಜೆಪಿ ಶಾಸಕರು ಪತ್ರ ಬರೆದಿರುವ ಬೆಳವಣಿಗೆಯು, ಜೆಡಿಎಸ್ ಹಾಗೂ ಬಿಜೆಪಿ ನಡುವಿನ ಕಾದಾಟಕ್ಕೆ ವೇದಿಕೆಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ವಿದ್ಯುತ್ ಹಾಗೂ ವಿದ್ಯುತ್ ಉಪಕರಣಗಳ ಖರೀದಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದ ಜೆಡಿಎಸ್, ಈ ಬಗ್ಗೆ ತನಿಖೆ ನಡೆಸಲು ಸದನ ಸಮಿತಿ ರಚಿಸುವಂತೆ ಪಟ್ಟು ಹಿಡಿದಿತ್ತು. ಅದರಂತೆ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸದನ ಸಮಿತಿಯನ್ನು ರಚಿಸಲಾಗಿದೆ.

ಸದನ ಸಮಿತಿ ತನ್ನ ವರದಿಯನ್ನು ನೀಡುವ ಮುಂಚಿತವಾಗಿಯೆ, ಕಾಂಗ್ರೆಸ್-ಜೆಡಿಎಸ್ ಹಾಗೂ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರಕಾರದ ಅವಧಿ (2004-08)ಯಲ್ಲಿ ನಡೆದಿರುವ ಅವ್ಯವಹಾರದ ತನಿಖೆ ನಡೆಸುವಂತೆ ಬಿಜೆಪಿ ಶಾಸಕರು ಆಗ್ರಹಿಸಿದ್ದಾರೆ. ಈ ಅವಧಿಯಲ್ಲಿ ಇಂಧನ ಇಲಾಖೆಯ ಜವಾಬ್ದಾರಿಯನ್ನು ಜೆಡಿಎಸ್ ಹಿರಿಯ ನಾಯಕ ಎಚ್.ಡಿ.ರೇವಣ್ಣ ವಹಿಸಿಕೊಂಡಿದ್ದರು.

ಬಿಜೆಪಿ ಶಾಸಕರು ಪತ್ರ ಬರೆದು ತನಿಖಾ ಸಮಿತಿಯನ್ನು ರಚಿಸುವಂತೆ ಸರಕಾರಕ್ಕೆ ಮನವಿ ಸಲ್ಲಿಸಿರುವುದು, ಜೆಡಿಎಸ್ ನಾಯಕರನ್ನು ಕೆರಳಿಸುವಂತೆ ಮಾಡಿದೆ. ಮುಂಬರುವ ದಿನಗಳಲ್ಲಿ ಉಭಯ ಪಕ್ಷಗಳ ನಡುವೆ ಈ ವಿಷಯ ಪರಸ್ಪರ ವಾಗ್ವಾದಕ್ಕೆ ಎಡೆ ಮಾಡಿಕೊಡಲಿದೆ ಎಂದು ಹೇಳಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X