ಕನ್ನಡ ಮಾಧ್ಯಮ:ನೇಮಕಾತಿಯಲ್ಲಿ ಶೇ.5ರಷ್ಟು ಮೀಸಲಾತಿ

ಬೆಂಗಳೂರು, ಜು. 6: ಒಂದರಿಂದ ಹತ್ತನೆ ತರಗತಿಯ ವರೆಗೆ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿದ ಪ್ರತಿಯೊಬ್ಬರಿಗೂ ನಾಗರಿಕ ಸೇವಾ ಹುದ್ದೆಗಳ ನೇರ ನೇಮಕಾತಿಯಲ್ಲಿ ಶೇ.5ರಷ್ಟು ಮೀಸಲಾತಿ ಕಲ್ಪಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಾಜ್ಯ ನಾಗರಿಕ ಸೇವಾ ಹುದ್ದೆಗಳ ನೇರ ನೇಮಕಾತಿಗೆ ದೇಶದ ಯಾವುದೇ ಭಾಗದಲ್ಲಿ ಒಂದರಿಂದ ಹತ್ತನೆ ತರಗತಿಯ ವರೆಗೆ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿದ ಪ್ರತಿಯೊಬ್ಬ ಅಭ್ಯರ್ಥಿಯು ಮೀಸಲಾತಿ ಪಡೆಯಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Next Story





