ಜು.7;ದ.ಕ,ಕೊಡಗು,ಉಡುಪಿ ಜಿಲ್ಲೆಗಳ ಕಾಂಗ್ರೆಸ್ ಪ್ರತಿನಿಧಿಗಳ ಸಮಾವೇಶ

ಮಂಗಳೂರು.ಜು.6:ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಆಯೋಜಿಸಲಾದ ದಕ್ಷಿಣ ಕನ್ನಡ ,ಕೊಡಗು ಮತ್ತು ಉಡುಪಿ ಜಿಲ್ಲೆ ಸೇರಿದಂತೆ ಪಕ್ಷದ ಮೈಸೂರು ವಿಭಾಗ ಮಟ್ಟದ ಪ್ರತಿನಿಧಿಗಳ ಸಮಾವೇಶದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮತ್ತು ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸುದ್ದಿಗೊಷ್ಠಿಯಲ್ಲಿಂದು ತಿಳಿಸಿದ್ದಾರೆ.
ನಗರದ ಅಡ್ಯಾರ್ ಗಾರ್ಡ್‌ನ್‌ನಲ್ಲಿ ಶುಕ್ರವಾರ ಆಯೋಜಿಸಲಾದ ಜುಲೈ 7ರಂದು ಅಪರಾಹ್ನ 2 ಗಂಟಗೆ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯರ ಜೊತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಮತ್ತು ವಿಷ್ಣನಾಧ್,ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ ,ಕಾರ್ಯಧ್ಯಕ್ಷ ಅಧ್ಯಕ್ಷ ದಿನೇಶ್ ಗುಂಡೂರಾವ್, ಉತ್ತರ ವಿಭಾಗದ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್, ಸಚಿವರು ಜಿಲ್ಲೆಯ ಶಾಸಕರು ಹಾಗೂ ಪಕ್ಷದ ಹಿರಿಯ ಮುಖಂಡರಾದ,ಆಸ್ಕರ್ ಫೆರ್ನಾಂಡೀಸ್ ಜನಾರ್ದನ ಪೂಜಾರಿ,ವೀರಪ್ಪ ಮೊಯ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸೀತಾರಾಮ್,ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್,ದ.ಕ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹಾಗೂ ವಿವಿಧ ಘಟಕಗಳ ಪ್ರತಿನಿಧಿಗಳು ಸಚಿವರು ,ಶಾಸಕರು ಭಾಗವಹಿಸಲಿದ್ದಾರೆ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಶಶಿಧರ ಹೆಗ್ಡೆ,ಪಿಯೂಸ್ ರೋಡ್ರಿಗಸ್,ಕಣಚೂರು ಮೋನು,ಸಂತೋಷ್ ಕುಮಾರ್ ಶೆಟ್ಟಿ,ಸುಧೀರ್ ಟಿ.ಕೆ,ನಝೀರ್ ಬಜಾಲ್ ಮೊದಲಾದವರು ಉಪಸ್ಥಿತರಿದ್ದರು.





