ಬಸ್ ಚಾಲಕನಿಗೆ ಶಿಕ್ಷೆ
ಉಡುಪಿ, ಜು.6: ಅತೀವೇಗ ಹಾಗೂ ನಿರ್ಲಕ್ಷದಿಂದ ಬಸ್ಸನ್ನು ಚಲಾಯಿಸಿ, ಎದುರಿನಿಂದ ಬರುತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆದು ಸವಾರರೊಬ್ಬರ ಸಾವಿಗೆ ಕಾರಣವಾದ ಬಸ್ ಚಾಲಕನಿಗೆ ಉಡುಪಿಯ ನ್ಯಾಯಾಲಯ ಇಂದು ಒಟ್ಟು ಒಂದು ವರ್ಷ ಐದು ತಿಂಗಳ ಸೆರೆವಾಸ ಹಾಗೂ 2,500ರೂ. ದಂಡ ವಿಧಿಸಿ ತೀರ್ಪು ನೀಡಿದೆ.
2013ರ ಎ.5ರಂದು ಅಪರಾಹ್ನ ಎಂ.ಚಂದ್ರ ಎಂಬಾತ ತಾನು ಚಲಾಯಿಸುತಿದ್ದ ಮುಕಾಂಬಿಕಾ ಬಸ್ಸನ್ನು ಉಡುಪಿಯಿಂದ ಕುಂದಾಪುರದ ಕಡೆಗೆ ಅತಿ ವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ಉಪ್ಪೂರು ಗ್ರಾಮದ ಕುದ್ರುಬೆಟ್ಟು ಎಂಬಲ್ಲಿ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಮಧು ಯಾನೆ ಮಧುಕರ ಚಲಾಯಿಸಿ ಪ್ರಶಾಂತ್ ಎಂಬವರು ಸಹಸವಾರರಾಗಿ ನಿಧಾನವಾಗಿ ಚಲಿಸುತಿದ್ದ ಸ್ಕೂರಿಗೆ ಢಿಕ್ಕಿ ಹೊಡೆದಿತ್ತು. ಇದರಿಂದ ಸ್ಕೂಟರ್ ಸವಾರರಿಬ್ಬರಿಗೂ ತೀವ್ರ ಗಾಯಗಳಾಗಿ ಆಸ್ಪತ್ರೆಯಲ್ಲಿ ಮಧು ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಈ ಬಗ್ಗೆ ಆಗಿನ ಬ್ರಹ್ಮಾವರ ವೃತ್ತ ನಿರೀಕ್ಷಕ ಡಿ.ಟಿ.ಪ್ರಭು ತನಿಖೆ ನಡೆಸಿ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ಕುರಿತಂತೆ ಉಡುಪಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಪ್ರಕರಣದ ಸಾಕ್ಷ, ಪೂರಕ ಸಾಕ್ಷ್ಯ ಹಾಗೂ ವಾದ ವಿವಾದವನ್ನು ಆಲಿಸಿ ಆರೋಪಿ ವಿರುದ್ಧ ಪ್ರಕರಣ ಸಾಬೀತಾಗಿದೆ ಎಂದು ತೀರ್ಮಾನಿಸಿದ ನ್ಯಾಯಾಧೀಶ ಮಂಜುನಾಥ್ ಎಂ.ಎಸ್ ಆರೋಪಿಗೆ ಒಂದು ವರ್ಷ 5 ತಿಂಗಳು ಶಿಕ್ಷೆ ಹಾಗೂ ಒಟ್ಟು 2,500ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಪ್ರಕರಣದ ಕುರಿತಂತೆ ಉಡುಪಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ದಲ್ಲಿ ವಿಚಾರಣೆ ನಡೆದಿದ್ದು, ಪ್ರಕರಣದ ಸಾಕ್ಷ, ಪೂರಕ ಸಾಕ್ಷ್ಯ ಹಾಗೂ ವಾದ ವಿವಾದವನ್ನು ಆಲಿಸಿ ಆರೋಪಿ ವಿರುದ್ಧ ಪ್ರಕರಣ ಸಾಬೀತಾಗಿದೆ ಎಂದು ತೀರ್ಮಾನಿಸಿದ ನ್ಯಾಯಾಧೀಶ ಮಂಜುನಾಥ್ ಎಂ.ಎಸ್, ಆರೋಪಿಗೆ ಒಂದು ವರ್ಷ 5 ತಿಂಗಳು ಶಿಕ್ಷೆ ಹಾಗೂ ಒಟ್ಟು 2,500ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಪ್ರಕರಣದಲ್ಲಿ ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಮಮ್ತಾಝ್ ವಾದ ಮಂಡಿಸಿದ್ದರು.







