Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸೇನೆಯನ್ನು ಹಿಂದೆ ಪಡೆಯುವುದೇ ಮಾತುಕತೆಗೆ...

ಸೇನೆಯನ್ನು ಹಿಂದೆ ಪಡೆಯುವುದೇ ಮಾತುಕತೆಗೆ ಪೂರ್ವ ಶರತ್ತು: ಚೀನಾ ಮಾಧ್ಯಮ

ವಾರ್ತಾಭಾರತಿವಾರ್ತಾಭಾರತಿ8 July 2017 7:09 PM IST
share
ಸೇನೆಯನ್ನು ಹಿಂದೆ ಪಡೆಯುವುದೇ ಮಾತುಕತೆಗೆ ಪೂರ್ವ ಶರತ್ತು:  ಚೀನಾ ಮಾಧ್ಯಮ

ಬೀಜಿಂಗ್, ಜು. 8: ಜರ್ಮನಿಯ ಹ್ಯಾಂಬರ್ಗ್‌ನಲ್ಲಿ ನಡೆಯುತ್ತಿರುವ ಜಿ20 ಶೃಂಗ ಸಮ್ಮೇಳನದಲ್ಲಿ ನಡೆದ ‘ಬ್ರಿಕ್ಸ್’ ನಾಯಕರ ಅನೌಪಚಾರಿಕ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಪರಸ್ಪರರನ್ನು ಅಭಿನಂದಿಸಿದ ಸ್ವಲ್ಪವೇ ಹೊತ್ತಿನ ಬಳಿಕ, ಚೀನಾದ ಸರಕಾರಿ ಒಡೆತನದ ಮಾಧ್ಯಮವು ಭಾರತದ ವಿರುದ್ಧ ಮತ್ತೆ ಹರಿಹಾಯ್ದಿದೆ.

 ಉಭಯ ದೇಶಗಳ ನಡುವಿನ ಮಾತುಕತೆಗೆ ಪೂರ್ವಶರತ್ತಾಗಿ ಸಿಕ್ಕಿಂನ ಡಾಂಗ್‌ಲಾಂಗ್ ವಲಯದಿಂದ ಭಾರತ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಅದು ಭಾರತವನ್ನು ಒತ್ತಾಯಿಸಿದೆ.

ಜಿ20 ಸಮ್ಮೇಳನದಲ್ಲಿ ಮೋದಿ ಮತ್ತು ಕ್ಸಿ ನಡುವೆ ನಡೆದ ವಿಸ್ತೃತ ಮಾತುಕತೆಗಳು, ಸಿಕ್ಕಿಂ ವಲಯದಲ್ಲಿ ಭಾರತ ಮತ್ತು ಚೀನಾ ಸೇನೆಗಳ ನಡುವೆ ಉಂಟಾಗಿರುವ ಮೂರು ವಾರಗಳ ಅವಧಿಯ ಬಿಕ್ಕಟ್ಟು ಶಮನಗೊಳ್ಳುವ ಭರವಸೆಯನ್ನು ಹುಟ್ಟಿಸಿರುವುದನ್ನು ಸ್ಮರಿಸಬಹುದಾಗಿದೆ.

 ಆದಾಗ್ಯೂ, ಭಾರತ ತನ್ನ ‘ಅತಿಕ್ರಮಣಕಾರಿ ಸೇನೆ’ಯನ್ನು ಹಿಂದಕ್ಕೆ ಪಡೆಯುವುದು ಎರಡು ದೇಶಗಳ ನಡುವಿನ ‘ಯಾವುದೇ ಅರ್ಥಪೂರ್ಣ ಮಾತುಕತೆಗೆ ಪೂರ್ವ ಶರತ್ತು ಆಗಿರುತ್ತದೆ’ ಎಂಬ ಹೇಳಿಕೆಯೊಂದನ್ನು ಚೀನಾದ ಅಧಿಕೃತ ವಾರ್ತಾ ಸಂಸ್ಥೆ ಕ್ಸಿನುವ ಪ್ರಕಟಿಸಿದೆ.

ಭಾರತ ತನ್ನ ಸೇನೆಯನ್ನು ಹಿಂದಕ್ಕೆ ಪಡೆದುಕೊಂಡರೆ ಮಾತ್ರ ಈ ಬಿಕ್ಕಟ್ಟಿಗೆ ಪರಿಹಾರವೊಂದು ಸಾಧ್ಯ ಎಂಬ ಚೀನಾದ ನಿಲುವನ್ನು ಈ ಹೇಳಿಕೆ ದೃಢೀಕರಿಸಿದೆ.

ಭೂತಾನ್ ತನ್ನದೆಂದು ಹೇಳುವ ಡಾಂಗ್‌ಲಾಂಗ್ ಅಥವಾ ಡೋಕ್ಲಮ್‌ನಲ್ಲಿ ಚೀನಾದ ಸೇನೆ ನಿರ್ಮಿಸುತ್ತಿದ್ದ ರಸ್ತೆಯನ್ನು ಭಾರತೀಯ ಪಡೆಗಳು ನಿಲ್ಲಿಸಿದ ಬಳಿಕ ಜೂನ್ 16ರಂದು ಬಿಕ್ಕಟ್ಟು ಆರಂಭವಾಗಿದೆ.

ಭೂತಾನ್ ಸರಕಾರದ ಒಪ್ಪಿಗೆಯಿಂದ ತನ್ನ ಸೇನೆ ಈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದೆ ಎಂದು ಭಾರತ ಹೇಳಿದೆ. ಯಥಾಸ್ಥಿತಿಯನ್ನು ಕಾಯ್ದುಕೊಂಡು ಬರುವಂತೆ ಭೂತಾನ್ ಮತ್ತು ಭಾರತ ಚೀನಾಕ್ಕೆ ಸೂಚಿಸಿವೆ.

‘‘ಡೋಕ್ಲಮ್ ಭೂತಾನಕ್ಕೆ ಸೇರಿದೆ ಎಂದು ಭಾರತ ಹೇಳುತ್ತಿದೆ ಹಾಗೂ ಭೂತಾನನ್ನು ರಕ್ಷಿಸುವ ಹೆಸರಿನಲ್ಲಿ ತನ್ನ ಅತಿಕ್ರಮಣವನ್ನು ಸಮರ್ಥಿಸಲು ಅದು ಪ್ರಯತ್ನಿಸುತ್ತಿದೆ’’ ಎಂದು ಕ್ಸಿನುವ ಹೇಳಿದೆ.

‘ಡೋಕ್ಲಮ್ ಚೀನಾಕ್ಕೆ ಸೇರಿದೆ’ ಎಂಬುದನ್ನು ಸಾಬೀತುಪಡಿಸಲು, ಅದು ಬ್ರಿಟನ್ ಮತ್ತು ಚೀನಾಗಳ ನಡುವೆ 1890ರಲ್ಲಿ ಏರ್ಪಟ್ಟ ಒಪ್ಪಂದವನ್ನು ಉಲ್ಲೇಖಿಸಿದೆ.

‘‘ಚೀನಾ-ಭೂತಾನ್ ಗಡಿ ವಿವಾದಲ್ಲಿ ಮಧ್ಯಪ್ರವೇಶಿಸಲು ಭಾರತಕ್ಕೆ ಹಕ್ಕಿಲ್ಲ. ಭೂತಾನ್ ಪರವಾಗಿ ಈ ವಿವಾದಾಸ್ಪದ ಜಮೀನಿನ ಬಗ್ಗೆ ವ್ಯವಹರಿಸಲು ಅದಕ್ಕೆ ಅಧಿಕಾರವಿಲ್ಲ’’ ಎಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X