ದ.ಕ. ಜಿಲ್ಲೆಯಲ್ಲಿ ಕೋಮು ಸಂಘರ್ಷ: ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು, ಜು.8: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋಮು ಗಲಭೆ ವಿಚಾರದಲ್ಲಿ ಯಾವುದೇ ಸಂಘಟನೆಗಳು ಕಾನೂನು ಕೈಗೆತ್ತಿಕೊಂಡರೂ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ವಿಧಾನಸೌಧದಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಗೆ ನಿನ್ನೆಯೆಷ್ಟೇ ತಾನು ಖುದ್ದು ಭೇಟಿ ನೀಡಿದ್ದು, ಪೊಲೀಸ್ ಅಧಿಕಾರಿಗಳಿಗೆ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಸೂಚನೆ ನೀಡಿದ್ದೇನೆ ಎಂದರು.
ಯಾವುದೇ ಕೋಮಿಗೆ ಸೇರಿದ್ದರೂ, ತಪ್ಪು ಮಾಡಿದರೆ ಯಾರನ್ನೂ ಬಿಡುವುದಿಲ್ಲ. ತಪ್ಪು ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಸಿಬ್ಬಂದಿಗೆ ಆದೇಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದರು.
Next Story





