Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನರ್ಮ್ ಬಸ್ ಸೇವೆ ನಿಲುಗಡೆ ವಿರುದ್ಧ ಮನವಿ

ನರ್ಮ್ ಬಸ್ ಸೇವೆ ನಿಲುಗಡೆ ವಿರುದ್ಧ ಮನವಿ

ವಾರ್ತಾಭಾರತಿವಾರ್ತಾಭಾರತಿ8 July 2017 8:39 PM IST
share
ನರ್ಮ್ ಬಸ್ ಸೇವೆ ನಿಲುಗಡೆ ವಿರುದ್ಧ ಮನವಿ

ಉಡುಪಿ, ಜು.8: ಜಿಲ್ಲೆಯಲ್ಲಿ ನರ್ಮ್ ಬಸ್ ಸಂಚಾರ ನಿಲುಗಡೆಗೊಳಿಸಿದಲ್ಲಿ ತೀವ್ರವಾದ ಪ್ರತಿಭಟನೆ ನಡೆಸಲಾಗುವುದು ಎಂದು ಉಡುಪಿ ಜಿಲ್ಲಾ ಕೃಷಿಕ ಸಂಘ ಎಚ್ಚರಿಸಿದೆ. ಈ ಕುರಿತು ಮನವಿ ಪತ್ರವನ್ನು ಅದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮದ್ವರಾಜ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಿದೆ.

ನರ್ಮ್ ಬಸ್ ಆರಂಭಗೊಂಡು ತಿಂಗಳು ಕಳೆಯುವುದರೊಳಗೆ ನಿಲುಗಡೆಯ ಪುಕಾರು ಹಬ್ಬಲಾರಂಭಿಸಿತ್ತು. ಆಗ ಜಿಲ್ಲಾ ಕೃಷಿಕ ಸಂಘ, ಬಸ್ಸುಗಳನ್ನು ಖಾಸಗಿ ಬಸ್ಸುಗಳ ಸಂಚಾರವಿರದ ಗ್ರಾಮಾಂತರ ಪ್ರದೇಶಗಳಿಗೆ ವಿಸ್ತರಿಸಿದರೆ ಕೃಷಿಕರು, ಜನಸಾಮಾನ್ಯರು ಹಾಗು ವಿದ್ಯಾರ್ಥಿಗಳಿಗೆ ಅನುಕೂಲವಾಗುವುದು ಎಂದು ಸಚಿವ ಪ್ರಮೋದ್ ಮಧ್ವರಾಜ್‌ರಿಗೆ ಮನವಿ ಸಲ್ಲಿಸಿ ಒತ್ತಾಯಿಸಿತ್ತು.

ಜಿಲ್ಲಾ ಕೃಷಿಕ ಸಂಘದ ಮನವಿಗೆ ಸ್ಪಂದಿಸಿದ ಸಚಿವರು ಹಾಗೂ ಜಿಲ್ಲಾಡಳಿತ ನರ್ಮ್ ಬಸ್‌ಗಳನ್ನು ಜಿಲ್ಲೆಯ ಹಲವು ಗ್ರಾಮಾಂತರ ಪ್ರದೇಶಗಳಿಗೆ ಓಡಿಸಲು ಕ್ರಮಕೈಗೊಂಡಿತ್ತು. ಇದೀಗ ಖಾಸಗಿ ಬಸ್ ಮಾಲಕರು ಕೋರ್ಟ್ ನಿಂದ ತಡೆಯಾಜ್ಞೆ ತಂದ ಕಾರಣ ಜಿಲ್ಲೆಯಲ್ಲಿ ನರ್ಮ್ ಬಸ್ಸುಗಳ ಓಡಾಟ ನಿಲುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ ಎಂದು ಸಂಘ ಮನವಿಯಲ್ಲಿ ತಿಳಿಸಿದೆ.

ಜಿಲ್ಲೆಯ ಖಾಸಗಿ ಬಸ್‌ಗಳೇ ನೀತಿ-ನಿಯಮಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಅವುಗಳ ನಡುವೆಯೇ ಇರುವ ಪೈಪೋಟಿಯಿಂದ ಬಸ್ ಪ್ರಯಾಣಿಕರಿಗೆ ಸಂಕಷ್ಟಗಳು ತಪ್ಪಿದ್ದಲ್ಲ. ಈ ಬಸ್ಸುಗಳಲ್ಲಿ ಹಿರಿಯ ನಾಗರೀಕರು, ಮಹಿಳೆಯರು- ಮಕ್ಕಳಿಗೆ ಮರ್ಯಾದೆ ನೀಡುವ ಸೌಜನ್ಯ ಇರುವ ಬಸ್ ಸಿಬಂದಿಗಳು ಬಹಳ ಕಡಿಮೆ. ಇವರುಗಳ ಮರ್ಜಿಗೆ ತಕ್ಕಂತೆ ಬಸ್ಸುಗಳ ಸಂಚಾರವೇ ಹೊರತು, ಪ್ರಯಾಣಿಕರ ಹಿತಾಸಕ್ತಿ, ಸುರಕ್ಷೆಗೆ ಗಮನ ಕಡಿಮೆ.

ಆದ್ದರಿಂದ ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ನರ್ಮ್ ಬಸ್ಸುಗಳ ನಿಲುಗಡೆಯಾಗಬಾರದು. ಮತ್ತು ಈಗ ಆರಂಭಗೊಂಡಿರುವ ಮಾರ್ಗಗಳಲ್ಲಿ ಬಸ್ಸುಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ಸಂಘವು ಮನವಿಯಲ್ಲಿ ಒತ್ತಾಯಿಸಿದೆ. ಮನವಿ ಸಲ್ಲಿಸಿದ ನಿಯೋಗದಲ್ಲಿ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು, ದಿನೇಶ್ ಶೆಟ್ಟಿ ಹೆರ್ಗ, ಸುಧರ್ಮಕುಂದರ್, ನಾರಾಯಣ ಪಿತ್ರೋಡಿ, ರವೀಂದ್ರ ಗುಜ್ಜರಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X