Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಕ್ಕಳ ಮೇಲಿನ ಪೂರ್ವಗ್ರಹ ಪೀಡಿತ...

ಮಕ್ಕಳ ಮೇಲಿನ ಪೂರ್ವಗ್ರಹ ಪೀಡಿತ ಯೋಚನೆಗಳಿಂದ ಹೊರಬನ್ನಿ: ಜಿ.ಎನ್.ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ8 July 2017 9:14 PM IST
share

ಬೆಂಗಳೂರು, ಜು.8: ಪೋಷಕರು ಮಕ್ಕಳ ಮೇಲಿಟ್ಟಿರುವ ಪೂರ್ವಗ್ರಹ ಪೀಡಿತ ಯೋಚನೆಗಳನ್ನು ಕಿತ್ತುಹಾಕಿ, ಮಾನವೀಯತೆಯ ಹಿನ್ನೆಲೆಯಲ್ಲಿ ಯೋಚನೆ ಮಾಡಬೇಕು ಎಂದು ಚಿಂತಕ ಜಿ.ಎನ್.ನಾಗರಾಜ್ ಅಭಿಪ್ರಾಯಿಸಿದ್ದಾರೆ.

ಶನಿವಾರ ನಗರದ ಎಸ್‌ಸಿಎಂ ಹೌಸ್‌ನಲ್ಲಿ ಆಯೋಜಿಸಿದ್ದ ಚಂಪಾ ಜಯಪ್ರಕಾಶ್ ಅವರ ‘21 ನೆ ಕ್ರೋಮೊಸೋಮ್ ಮತ್ತು ಇತರೆ ಕಥೆಗಳು’ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಇತ್ತೀಚಿಗೆ ಪೋಷಕರು ನಮಗೆ ಹುಟ್ಟುವ ಮಕ್ಕಳು ಡಾಕ್ಟರ್, ಎಂಜಿನಿಯರ್ ಅಥವಾ ಸರಕಾರಿ ಅಧಿಕಾರಿಯಾಗಬೇಕು ಎಂದು ಕನಸು ಕಾಣುತ್ತಾರೆ. ಅದಕ್ಕಾಗಿ ಮಕ್ಕಳ ಮೇಲೆ ಒತ್ತಡ ಹೇರುತ್ತಾರೆ ಎಂದು ಹೇಳಿದರು.

ಮಕ್ಕಳ ಮೇಲೆ ಅಪಾರವಾದ ಪೂರ್ವಗ್ರಹ ಪೀಡಿತ ಆಲೋಚನೆ ಮಾಡುವುದರಿಂದ ಅನಿವಾರ್ಯವಾಗಿ ಜನಿಸುವ ಅಂಗವಿಕಲ ಮಕ್ಕಳ ನೂರಾರು ಕನಸುಗಳು ಸಣ್ಣದರಲ್ಲಿಯೇ ಭಸ್ಮವಾಗುತ್ತಿವೆ. ಅಂಗವಿಕಲ ಮಕ್ಕಳು ಎಂದು ತಿಳಿದ ತಕ್ಷಣ ಅವರನ್ನು ಮನೆಯ ಮೂಲೆಯಲ್ಲಿ ಸ್ಥಾನ ನೀಡುತ್ತಿದ್ದಾರೆ. ಆ ಮಕ್ಕಳಲ್ಲಿರುವ ಸಾಮರ್ಥ್ಯ, ತಿಳುವಳಿಕೆ ಮಟ್ಟ ಏನು ಎಂಬುದನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇತ್ತೀಚಿಗೆ ಅಶ್ವಿನ್ ಎಂಬ ಅಂಗವಿಕಲ ವ್ಯಕ್ತಿ ಮನೆಯಲ್ಲಿ ಪೋಷಕರು ನಿನ್ನಿಂದ ಏನು ಮಾಡೋಕೆ ಆಗಲ್ಲ ಎಂದು ಛೇಡಿಸಿದ್ದ ಪೋಷಕರಿಗೆ ಒಂದು ಕಂಪೆನಿಯ ಮಾಲಕನಾಗಿ ಸಾಧನೆ ಮಾಡಿ ತೋರಿಸಿದ್ದಾನೆ. ಇಂತಹ ಸಾಮರ್ಥ್ಯವುಳ್ಳವರು ಹಲವಾರು ಜನರಿದ್ದಾರೆ. ಆದರೆ, ಪೋಷಕರ ನಿರ್ಲಕ್ಷದಿಂದ ಅವರ ಸಾಮರ್ಥ್ಯ ಹೊರಗಡೆ ಬರುತ್ತಿಲ್ಲ. ಹೀಗಾಗಿ ಪೋಷಕರು ಅಂಗವಿಕಲ ಮಕ್ಕಳನ್ನು ನಿರ್ಲಕ್ಷಿಸುವುದರ ಬದಲಿಗೆ ಅವರ ಕನಸು ಮತ್ತು ಸಾಮರ್ಥ್ಯವನ್ನು ಅರ್ಥ ಮಾಡಿಕೊಂಡು ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಅಂಗವಿಕಲ ಮಗುವಿನ ತಾಯಿ ಶ್ರೀದೇವಿ ಮಾತನಾಡಿ, ಸಾಮಾನ್ಯರಂತೆ ನಮಗೂ ಮಗು ಹುಟ್ಟಿದಾಗ ಹಲವಾರು ಆಸೆಗಳಿದ್ದವು. ಆದರೆ, ಮಗು ಹುಟ್ಟಿದ 14 ತಿಂಗಳವರೆಗೂ ಯಾವುದೇ ಬೆಳವಣಿಗೆ ಕಾಣಲಿಲ್ಲ. ನಮಗೂ ತುಂಬಾ ಬೇಸರವೆನಿಸಿತು. ಆದರೆ, ನಾವು ಆತ್ಮವಿಶ್ವಾಸ ಕಳೆದುಕೊಳ್ಳಲಿಲ್ಲ. ನಮ್ಮ ಮಗಳಿಗಾಗಿರುವ ಸಮಸ್ಯೆ ಕುರಿತು ವೈದ್ಯರಿಗೆ ತೋರಿಸಿದೆವು. ವೈದ್ಯರ ಸಲಹೆ ಪಡೆದುಕೊಂಡು, ಪ್ರತಿ 15 ದಿನಕ್ಕೊಮ್ಮೆ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೆ. ಮಗು ಬೆಳೆಯಬೇಕು ಎಂಬ ಉದ್ದೇಶದಿಂದ ಯಾವುದೇ ಭೇದ-ಭಾವ ಮಾಡದೆ, ಹಣಕ್ಕೂ ಲೆಕ್ಕವಿಡದೆ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ ಮಾಡಿಸಿದೆವು. ದಿನದಲ್ಲಿ 6 ಗಂಟೆಗಳ ಕಾಲ ಮಗುವಿನ ಆರೈಕೆ ಮಾಡುತ್ತಿದೆ. ಇದರಿಂದಾಗಿ ಐದು ವರ್ಷಗಳಲ್ಲಿ ಮಗು ಚೇತರಿಸಿಕೊಂಡಿತು. ಆದರೆ, ಈ ಮಗುವಿಗೆ ಶಿಕ್ಷಣ ನೀಡಲು ಯಾವುದೇ ಸಂಸ್ಥೆಗಳು ಪ್ರವೇಶ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇಂತಹ ಸಂದರ್ಭದಲ್ಲಿಯೂ ಬೇಸರ ಪಟ್ಟುಕೊಳ್ಳದೆ ಮಗುವನ್ನು ಬೇರೆ ಶಾಲೆಗೆ ಸೇರಿಸಿದೆವು ಎಂದ ಅವರು, ಸುಮಾರು 20 ವರ್ಷಗಳ ಕಾಲ ಮಗಳಿಗಾಗಿ ಪಟ್ಟ ಶ್ರಮದ ಪರಿಣಾಮವಿಂದು ನಗರದ ಆಂಧ್ರಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿ ದುಡಿಯುತ್ತಿದ್ದಾಳೆ. ಹೀಗಾಗಿ ಜೀವನದಲ್ಲಿ ಮಕ್ಕಳ ಬಗ್ಗೆ ಗೌರವ ಮತ್ತು ಪ್ರೀತಿ ಇರಬೇಕು. ಎಂತಹ ಮಗುವೇ ಆಗಲಿ ಅವರ ಸಾಮರ್ಥ್ಯಕ್ಕೆ ತಕ್ಕಂತೆ ಬೆಳೆಯುತ್ತಾರೆ ಎಂಬ ಆತ್ಮವಿಶ್ವಾಸವಿರಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಂಗವಿಕಲ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಡಾ.ಎಂ.ಸಿದ್ದರಾಜು, ನಿವೃತ್ತ ಇಂಗ್ಲೀಷ್ ಅಧ್ಯಾಪಕ ಪ್ರೊ.ವಿ.ಎನ್.ಲಕ್ಷ್ಮಿನಾರಾಯಣ, ಸಾಧನೆ ಮಾಡಿದ ವಿಶೇಷ ಚೇತನ ಶ್ರವಂತಿ, ಲೇಖಕಿ ಚಂಪಾ ಜಯಪ್ರಕಾಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X