ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ದಿನೇಶ್

ಉಡುಪಿ, ಜು.8: ಕರ್ನಾಟಕ ವಿಧಾನ ಪರಿಷತ್‌ಗೆ ನೈರುತ್ಯ ಪದವೀದರ ಕ್ಷೇತ್ರದಿಂದ 2018ರಲ್ಲಿ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ.
ಕಳೆದ ವಿಧಾನ ಪರಿಷತ್‌ನ ನೈರುತ್ಯ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅಲ್ಪಮತದ ಅಂತರದಿಂದ ಸೋಲು ಕಂಡ ಶಿವಮೊಗ್ಗ ದ ನ್ಯಾಯವಾದಿ ಎಸ್.ಪಿ.ದಿನೇಶ್ ಇವರನ್ನು ಕಾಂಗ್ರೆಸ್ 2018ರಲ್ಲಿ ಅಭ್ಯರ್ಥಿಯಾಗಿ ಪುನರಾಯ್ಕೆ ಮಾಡಿದೆ. ಇದಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತನ್ನ ಅನುಮೋದನೆಯನ್ನು ನೀಡಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
Next Story





