ಕಟ್ಟಡದಿಂದ ಬಿದ್ದು ಮೃತ್ಯು
ಮಣಿಪಾಲ, ಜು.8: ದಶರಥ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಕಾರ್ಮಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ 3ಗಂಟೆ ಸುಮಾರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ.
ಮೃತರನ್ನು ಕುರ್ಕಾಲು ಗ್ರಾಮದ ಕುಂಜಾರುಗಿರಿಯ ವಾದಿರಾಜ ಆಚಾರ್ಯ ಎಂದು ಗುರುತಿಸಲಾಗಿದೆ. ಇವರು ಜು.3ರಂದು ಕಟ್ಟಡದ ಸೆಂಟ್ರಿಂಗ್ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ 15 ಅಡಿ ಎತ್ತರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





