ಗುಂಡಿನ ದಾಳಿ: ಯೋಧರಿಗೆ ಗಾಯ

ಶ್ರೀನಗರ, ಜು. 8: ಉತ್ತರಕಾಶ್ಮೀರದ ಬಂಡಿಪುರದಲ್ಲಿ ಶನಿವಾರ ಬೆಳಗ್ಗೆ ಉಗ್ರರು ನಡೆಸಿದ ಹೊಂಚು ದಾಳಿಯಲ್ಲಿ ಮೂವರು ಭಾರತೀಯ ಯೋಧರು ಗಾಯಗೊಂಡಿದ್ದಾರೆ.
ವಾಹನಗಳ ಮೇಲೆ ಉಗ್ರರು ದಾಳಿ ನಡೆಸಿದರು. ಬಳಿಕ ಈ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ ಹಾಗೂ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವರ್ಷ ಗುಂಡಿನ ದಾಳಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ನಾಯಕ ವಾನಿ ಹತನಾದ ದಿನದ ಕಾರಣಕ್ಕೆ ಪ್ರತ್ಯೇಕತಾವಾದಿಗಳು ಬಂದ್‌ಗೆ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಶ್ಮೀರದ ವಿವಿಧ ಭಾಗಗಳಲ್ಲಿ ಕರ್ಫ್ಯೂ ರೀತಿಯ ನಿರ್ಬಂದ ಹೇರಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಕಾಶ್ಮೀರ ಕಣಿವೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಾಗೂ ಮುಂಜಾಗ್ರತಾ ಕ್ರಮವಾಗಿ ಶನಿವಾರ ಕೆಲವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





