Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸುಶ್ಮಾ ಸ್ವರಾಜ್ ಸಹಾಯ ಯಾಚಿಸಿದ...

ಸುಶ್ಮಾ ಸ್ವರಾಜ್ ಸಹಾಯ ಯಾಚಿಸಿದ ಕ್ಯಾನ್ಸರ್ ಪೀಡಿತ ಪಾಕ್ ಮಹಿಳೆ

ವಾರ್ತಾಭಾರತಿವಾರ್ತಾಭಾರತಿ9 July 2017 11:08 AM IST
share
ಸುಶ್ಮಾ ಸ್ವರಾಜ್ ಸಹಾಯ ಯಾಚಿಸಿದ ಕ್ಯಾನ್ಸರ್ ಪೀಡಿತ ಪಾಕ್ ಮಹಿಳೆ

ಇಸ್ಲಾಮಾಬಾದ್, ಜು.9: ಕ್ಯಾನ್ಸರ್‌ನಿಂದ ಬಳಲುತ್ತಿರುವ ಪಾಕಿಸ್ತಾನದ ಮಹಿಳೆಯೊಬ್ಬರು ಭಾರತಕ್ಕೆ ಭೇಟಿ ನೀಡಿ ಚಿಕಿತ್ಸೆ ಪಡೆಯಲು ಮೆಡಿಕಲ್ ವೀಸಾದ ನಿರೀಕ್ಷೆಯಲ್ಲಿದ್ದು, ಸಹಾಯಕ್ಕಾಗಿ ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್ ಮೊರೆ ಹೋಗಿದ್ದಾರೆ.

ಪಾಕ್‌ನ 25ರ ಹರೆಯದ ಫೈಝಾ ತನ್ವೀರ್ ಎಂಬ ಮಹಿಳೆ ಮೆಡಿಕಲ್ ವೀಸಾಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಅರ್ಜಿಯನ್ನು ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ತಿರಸ್ಕರಿಸಿದೆ.

ಫೈಝಾ ತನ್ವೀರ್ ಗಾಝಿಯಾಬಾದ್‌ನಲ್ಲಿರುವ ಇಂದ್ರಪ್ರಸ್ಥ ಡೆಂಟಲ್ ಕಾಲೇಜ್ ಹಾಗೂ ಆಸ್ಪತ್ರೆಗೆ(ಐಡಿಸಿಎಚ್)ಭೇಟಿ ನೀಡುವ ಯೋಜನೆ ಹಾಕಿಕೊಂಡಿದ್ದು, ಕ್ಯಾನ್ಸರ್ ಚಿಕಿತ್ಸೆಗೆ ಈಗಾಗಲೇ 10 ಲಕ್ಷ ರೂ. ಮುಂಗಡ ಮೊತ್ತ ನೀಡಿದ್ದಾರೆ. ಆದರೆ, ಭಾರತಕ್ಕೆ ಬರಲು ಅವರಿಗೆ ಸಾಧ್ಯವಾಗುತ್ತಿಲ್ಲ. ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈ ಕಮಿಶನ್ ಫೈಝಾ ಸಲ್ಲಿಸಿರುವ ಮೆಡಿಕಲ್ ವೀಸಾವನ್ನು ತಿರಸ್ಕರಿಸುವುದೇ ಇದಕ್ಕೆ ಕಾರಣ ಎಂದು ಮೂಲವೊಂದು ತಿಳಿಸಿದೆ.

ಉಭಯ ದೇಶಗಳ ನಡುವೆ ಸ್ನೇಹ-ಭಾಂದವ್ಯ ಹದೆಗಟ್ಟಿರುವ ಹಿನ್ನೆಲೆಯಲ್ಲಿ ಮಗಳು ಸಲ್ಲಿಸಿರುವ ವೀಸಾ ಅರ್ಜಿ ತಿರಸ್ಕತವಾಗಿದೆ ಎಂದು ಫೈಝಾ ತನ್ವೀರ್‌ರ ತಾಯಿ ಹೇಳಿದ್ದಾರೆ.

ವೀಸಾ ಪಡೆಯಲು ವಿಫಲವಾಗಿರುವ ಫೈಝಾ ತನ್ವೀರ್ ನೆರವಿಗಾಗಿ ಸಾಮಾಜಿಕ ಜಾಲತಾಣದ ಮೊರೆ ಹೋಗಿದ್ದಾರೆ. ಕಳೆದ ಕೆಲವು ದಿನಗಳಿಂದ ಟ್ವಿಟರ್‌ನಲ್ಲಿ ಮನವಿ ಮಾಡಿಕೊಳ್ಳುತ್ತಿರುವ ಪಾಕ್ ಮಹಿಳೆ ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಭಾರತದ ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್ ನೆರವನ್ನು ಯಾಚಿಸಿದ್ದಾರೆ.

ಫೈಝಾ ತನ್ವೀರ್ ಎಮೆಲೊಬ್ಲಾಸ್ಟೊಮ ಎನ್ನುವ ಬಾಯಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಬಾಯಿಯಲ್ಲಿ ಕ್ಯಾನ್ಸರ್ ಗಡ್ಡೆ ಬೆಳೆದಿದೆ. ತನ್ನ ಬಾಯಿಯಲ್ಲಿರುವ ಕ್ಯಾನ್ಸರ್‌ಗಡ್ಡಯ ಫೋಟೊವನ್ನು ಟ್ವಿಟರ್ ಪೇಜ್‌ನಲ್ಲಿ ಹಾಕಿರುವ ತನ್ವೀರ್ ಸುಶ್ಮಾಜೀ, ದಯವಿಟ್ಟು ನನ್ನ ಜೀವ ಉಳಿಸಲು ನೆರವಾಗಿ. ನನಗೆ ದಯವಿಟ್ಟ್ಟು ಸಹಾಯ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.

ಕಳೆದ ತಿಂಗಳು ಪಾಕಿಸ್ತಾನ ಮೂಲದ ಮಗುವೊಂದಕ್ಕೆ ತುರ್ತು ಹೃದಯ ಶಸ್ತ್ರಚಿಕಿತ್ಸೆಗಾಗಿ ವೀಸಾವನ್ನು ನೀಡಲಾಗಿತ್ತು. ಸುಶ್ಮಾ ಸ್ವರಾಜ್ ಮಧ್ಯಪ್ರವೇಶದಿಂದ ಮಗುವಿನ ಹೆತ್ತವರಿಗೆ ವೀಸಾವನ್ನು ನೀಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X