ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ಜು.10ಕ್ಕೆ ಬೃಹತ್ ಸಮಾವೇಶ
ಬೆಂಗಳೂರು, ಜು. 9: ಜಾನುವಾರು ಮಾರಾಟ ನಿಷೇಧ ಕಾಯ್ದೆ ವಾಪಸ್ಸಾತಿ, ರೈತರ, ಕೃಷಿ ಕಾರ್ಮಿಕರ ಮತ್ತು ದಲಿತರ ಸಾಲಮನ್ನಾ , ಡಾ.ಎಂ.ಎಸ್.ಸ್ವಾಮಿನಾಥನ್ ವರದಿ ಅನುಷ್ಟಾನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರೈತ, ಕೃಷಿ ಕೂಲಿಕಾರ, ದಲಿತ ಸಂಘಟನೆಗಳ ಒಕ್ಕೂಟದಿಂದ ಇಂದು(ಜು.10) ನಗರದ ಶಿಕ್ಷಕರ ಸದನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಸಮಾವೇಶದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಮತ್ತು ಶಾಸಕ ಕೆ.ಎಸ್.ಪುಟ್ಟಣ್ಣಯ್ಯ, ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ, ಕೃಷಿ ಕೂಲಿಕಾರ್ಮಿಕರ ಸಂಘದ ಅಧ್ಯಕ್ಷ ನಿತ್ಯಾನಂದಸ್ವಾಮಿ, ರಾಜ್ಯ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮುಖಂಡ ಮುನಿಸ್ವಾಮಿ, ಮಾವಳ್ಳಿ ಶಂಕರ್ ಸೇರಿದಂತೆ ರೈತ, ದಲಿತ, ಕಾರ್ಮಿಕ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





