Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಜೆಪಿ, ಸಂಘಪರಿವಾರ ತಟಸ್ಥವಾದರೆ ಎಲ್ಲವೂ...

ಬಿಜೆಪಿ, ಸಂಘಪರಿವಾರ ತಟಸ್ಥವಾದರೆ ಎಲ್ಲವೂ ಸರಿಯಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದ.ಕ. ಜಿಲ್ಲೆಯಲ್ಲಿ ಕೋಮುಸಂಘರ್ಷ

ವಾರ್ತಾಭಾರತಿವಾರ್ತಾಭಾರತಿ9 July 2017 6:40 PM IST
share
ಬಿಜೆಪಿ, ಸಂಘಪರಿವಾರ ತಟಸ್ಥವಾದರೆ ಎಲ್ಲವೂ ಸರಿಯಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜು.9: ಬಿಜೆಪಿಯ ಕೆಲ ನಾಯಕರು ಮಂಗಳೂರಿನಲ್ಲಿ ಮತೀಯ ಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಬಿಜೆಪಿ ಮತ್ತು ಸಂಘ ಪರಿವಾರದ ಸಂಘಟನೆಗಳು ತಟಸ್ಥವಾದರೆ, ಜಿಲ್ಲೆಯಲ್ಲಿ ಎಲ್ಲವೂ ಸರಿ ಹೋಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ರವಿವಾರ ನಗರದ ಸ್ವಾತಂತ್ರ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಸಂಘಪರಿವಾರದ ಸಂಘಟನೆಗಳು ಸೇರಿದಂತೆ ಎಲ್ಲ ಸಂಘಟನೆಗಳು ಮುಂದಾಗಬೇಕು. ಅದನ್ನು ಬಿಟ್ಟು ಕೋಮುಗಲಭೆಯನ್ನು ಸೃಷ್ಟಿಸಲು ಮುಂದಾಗುವ ಯಾವುದೇ ಸಂಘಟನೆಗಳಿದ್ದರೂ, ಅವುಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ನಾಯಕರು ಮಂಗಳೂರಿನಲ್ಲಿ ಮತೀಯ ಗಲಭೆಯನ್ನು ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಅವರು ಮೊದಲು ತಟಸ್ಥವಾದರೆ ಎಲ್ಲವೂ ಸರಿ ಹೋಗಲಿದೆ. ಸುಖಾ ಸುಮ್ಮನೆ ಆರೋಪ ಮಾಡುತ್ತಾ ಕೋಮು ಗಲಭೆಯನ್ನು ಪ್ರೇರೇಪಿಸುವುದನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದವರು ಹೇಳಿದರು.

ಶಾಂತಿ ಕದಡುವ ಸಂಘಟನೆಗಳ ವಿರುದ್ಧ ಕ್ರಮ: ಮಂಗಳೂರು ಗಲಭೆಗೆ ಕಾರಣವಾದವರ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಬಜರಂಗದಳ ಸೇರಿದಂತೆ ಸಂಘ ಪರಿವಾರದ ಸಂಘಟನೆಗಳು, ಎಸ್‌ಡಿಪಿಐ ಸೇರಿದಂತೆ ಹಲವು ಸಂಘಟನೆಗಳು ಶಾಂತಿ ಕಾಪಾಡಲು ಒತ್ತು ನೀಡಬೇಕು. ವಿನಾಃಕಾರಣ ಶಾಂತಿ ಕದಡಲು ಮುಂದಾದರೆ ಮುಲಾಜಿಲ್ಲದೆ ಕಾನೂನು ಕ್ರಮ ಜರಗಿಸಲಾಗುವುದು ಎಂದರು.

ಶಾಂತಿ ಸಭೆ: ಮಂಗಳೂರಿನಲ್ಲಿ ಉಂಟಾಗಿರುವ ಪ್ರಕ್ಷುಬ್ದ ವಾತಾವರಣವನ್ನು ತಿಳಿಗೊಳಿಸುವ ಸಂಬಂಧ ಈ ವಾರದಲ್ಲಿ ಸಂಘ-ಸಂಸ್ಥೆಗಳು, ಸರ್ವ ಪಕ್ಷಗಳ ಮುಖಂಡರೊಂದಿಗೆ ಶಾಂತಿ ಸಭೆಯನ್ನು ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆ ಕೋಮು ಗಲಭೆ ಹೆಚ್ಚಾಗಲು ಬಿಜೆಪಿಯವರೇ ಮೂಲ ಕಾರಣ. ನಿಷೇಧಾಜ್ಞೆಯ ನಡುವೆಯೂ ಸಂಸದರಾದ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್ ಇನ್ನಿತರ ಮುಖಂಡರು ಪ್ರತಿಭಟನೆ ನಡೆಸಿ ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಮಾಡುತ್ತಿದ್ದಾರೆಂದು ಅವರು ಆರೋಪಿಸಿದರು.

ಮಂಗಳೂರಿನ ಗಲಭೆಗೆ ತಾವೇ ಕಾರಣ ಎನ್ನುವ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಗಲಭೆಯಲ್ಲಿ ಕಾಂಗ್ರೆಸ್ ಪಕ್ಷದ ಯಾವೊಬ್ಬ ಕಾರ್ಯಕರ್ತನ ಕೈವಾಡವೂ ಇಲ್ಲ. ಜೀವಮಾನದುದ್ದಕ್ಕೂ ಒಂದೇ ಒಂದು ಬಾರಿಯೂ ಪ್ರಚೋದನಾತ್ಮಕ ಭಾಷಣ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ. ಇಂತಹದ್ದು ಏನಿದ್ದರೂ ಬಿಜೆಪಿ ಮತ್ತು ಸಂಘ ಪರಿವಾರದ ಕೆಲಸ ಎಂದು ವಾಗ್ದಾಳಿ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X