ಚುನಾಯಿತ ಪ್ರತಿನಿಧಿಗಳಿಗೆ ತರಬೇತಿ ಅಗತ್ಯ: ಡಿ.ಎಚ್.ಶಂಕರಮೂರ್ತಿ

ಉಡುಪಿ, ಜು.9: ಪಕ್ಷದ ಬಗ್ಗೆ ವೈರಾಗ್ಯ, ಅಸಡ್ಡೆ ಮೂಡುತ್ತಿರುವ ಈ ಕಾಲಘಟ್ಟದಲ್ಲಿ ಸಂಘದ ನೈಜ ಚಿತ್ರಣದ ಕುರಿತು ಚುನಾಯಿತ ಪ್ರತಿನಿಧಿಗಳಿಗೆ ತರಬೇತಿ ನೀಡಬೇಕಾದ ಅಗತ್ಯ ಇದೆ ಎಂದು ರಾಜ್ಯ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಹೇಳಿದ್ದಾರೆ. ಕರಂಬಳ್ಳಿ ಫ್ರೆಂಡ್ಸ್‌ನ ದಶಮಾನೋತ್ಸವದ ಅಂಗವಾಗಿ ನಿರ್ಮಿಸಲಾಗುವ ಕರಂಬಳ್ಳಿ ಸಂಜೀವ ಶೆಟ್ಟಿ ಭವನಕ್ಕೆ ರವಿವಾರ ಕರಂಬಳ್ಳಿಯಲ್ಲಿ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡುತಿದ್ದರು.
ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ರಾಜಕಾರಣವನ್ನು ವೃತ್ತಿಯನ್ನಾಗಿ ಇಟ್ಟುಕೊಂಡು ರಾಜಕೀಯಕ್ಕೆ ಬಂದವರು ಲಕ್ಷಾಂತರ ಮಂದಿ ಇದ್ದಾರೆ. ಆದರೆ ಅದನ್ನೇ ವೃತ್ತಿವನ್ನಾಗಿ ಸ್ವೀಕಾರ ಮಾಡಿಕೊಂಡು ಸಮಾಜದ ಅಭಿವೃದ್ಧಿಗೆ ಪ್ರಯತ್ನ ಮಾಡಿದವರು ಕೆಲವು ಮಂದಿ ಮಾತ್ರ ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ಮಾಜಿ ಶಾಸಕ ಕೆ.ರಘಪತಿ ಭಟ್ ವಹಿಸಿದ್ದರು. ಜಿಪಂ ಅಧ್ಯಕ್ಷ ದಿನಕರ ಬಾಬು, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ್, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮೀನು ಮಾರಾಟ ೆಡರೇಶನ್‌ನ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಉದ್ಯಮಿಗಳಾದ ಪ್ರಭಾಕರ ಜಿ., ರಂಜನ್ ಕಲ್ಕೂರ, ರಂಜನ್, ಸಂಘದ ಅಧ್ಯಕ್ಷ ಗಿರಿಧರ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ಸಚ್ಚೇಂದ್ರ ಮತ್ತು ಸತೀಶ್ಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.







