ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ
ಮಂಗಳೂರು, ಜು.9: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ತೀವ್ರತರನಾದ (ಶೇ.75 ಅಂಗವಿಕಲತೆ ಹೊಂದಿರುವ) ದೈಹಿಕ ವಿಕಲಚೇತನರಿಗೆ ಮತ್ತು ಅವರ ಕುಟುಂಬದ ವಾರ್ಷಿಕ ವರಮಾನ 2 ಲಕ್ಷ ರೂ. ಗಳಿಂದ ಕಡಿಮೆ ಇರುವ 20ರಿಂದ 60 ವರ್ಷದ ವಯೋಮಾನದ ಶೈಕ್ಷಣಿಕ ಹಾಗೂ ಔದ್ಯೋಗಿಕ ಕಾರ್ಯಗಳಿಗೆ ಅನುಕೂಲವಾಗುವಂತೆ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಒದಗಿಸುವ ಯೋಜನೆಗೆ ಅರ್ಜಿ ಆಹ್ವಾನಿಸಲು ಪ್ರಾರಂಭಿಸಲಾಗಿದೆ.
ಆನ್‌ಲೈನ್‌ನಲ್ಲಿ (www.welfareofdisabled.kar.nic.in) ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಸೆ.14 ರ ವರೆಗೆ ನಿಗದಿಪಡಿಸಲಾಗಿದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಕಲಚೇತನರು ಮೂಲ ಪ್ರತಿಗಳನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಅಥವಾ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು/ತಾಲೂಕು ಪಂಚಾಯತ್‌ನ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ: 0824-2458173/2455999. ಸಂಪರ್ಕಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.







