Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ವಿಮಾನ ನಿಲ್ದಾಣ ಆರೋಗ್ಯಾಧಿಕಾರಿಯ ಆದೇಶದ...

ವಿಮಾನ ನಿಲ್ದಾಣ ಆರೋಗ್ಯಾಧಿಕಾರಿಯ ಆದೇಶದ ವಿರುದ್ಧ ಅನಿವಾಸಿ ಭಾರತೀಯರ ಆಕ್ರೋಶ

ಕೇಂದ್ರ, ರಾಜ್ಯ ಸರಕಾರಗಳು ಮಧ್ಯಪ್ರವೇಶಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ10 July 2017 6:12 PM IST
share
ವಿಮಾನ ನಿಲ್ದಾಣ ಆರೋಗ್ಯಾಧಿಕಾರಿಯ ಆದೇಶದ ವಿರುದ್ಧ ಅನಿವಾಸಿ ಭಾರತೀಯರ ಆಕ್ರೋಶ

ದುಬೈ, ಜು.10: ಅನಿವಾಸಿ ಭಾರತೀಯರು ವಿದೇಶಗಳಲ್ಲಿ ಮೃತಪಟ್ಟರೆ ಅವರ ಮೃತದೇಹವನ್ನು ತಾಯ್ನಾಡಿಗೆ ತರಬೇಕಿದ್ದರೆ 48 ಗಂಟೆ ಮುಂಚಿತವಾಗಿ ಅನುಮತಿ ಪಡೆದಿರಬೇಕೆಂಬ ಕೇರಳದ ಕರಿಪ್ಪೂರ್ ವಿಮಾನ ನಿಲ್ದಾಣದ ಆರೋಗ್ಯಾಧಿಕಾರಿಯ ಆದೇಶದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮೊದಲೇ ಸರಕಾರಗಳ ಕಠಿಣ ಕಾನೂನುಗಳಿಂದ ಸಂಕಷ್ಟ ಅನುಭವಿಸುತ್ತಿರುವ ಅನಿವಾಸಿ ಭಾರತೀಯರಿಗೆ ಈ ನಿಯಮವು ಮತ್ತಷ್ಟು ಕಂಟಕವಾಗಿ ಪರಿಣಮಿಸಲಿದೆ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಯುಎಇ ಯಲ್ಲಿ ಭಾರತೀಯರು ಮೃತಪಟ್ಟರೆ ಪೊಲೀಸ್ ವರದಿ ದಾಖಲಿಸಿ, ಆರೋಗ್ಯ ಅಧಿಕಾರಿಗಳಿಂದ ಮರಣೋತ್ತರ ಪರೀಕ್ಷೆ ನಡೆಸಬೇಕು. ವರದಿ ಬಂದ ಬಳಿಕ ಪೊಲೀಸರು ಯುಎಇ ಆರೋಗ್ಯ ಸಚಿವಾಲಯದಿಂದ ಮರಣ ಪ್ರಮಾಣ ಪತ್ರ ನೀಡಲು ನಿರಾಕ್ಷೇಪಣಾ ಪತ್ರ ನೀಡಿದ ಬಳಿಕ ಮರಣ ಪ್ರಮಾಣ ಪತ್ರ ಪಡೆದುಕೊಳ್ಳಬೇಕು. ನಂತರ ಯುಎಇ ಎಮಿಗ್ರಷನ್ ಕಚೇರಿಯಲ್ಲಿ ವೀಸಾವನ್ನು ರದ್ದುಪಡಿಸಬೇಕು. ಈ ಎಲ್ಲ ಪ್ರಕಿಯೆ ಮುಗಿದ ಬಳಿಕವೇ ಭಾರತೀಯ ದೂತವಾಸ ಕಚೇರಿಯು ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ ಮೃತ ವ್ಯಕ್ತಿಯ ಪಾಸ್ ಪೋರ್ಟನ್ನು ರದ್ದುಗೊಳಿಸಿ ಮರಣ ಪ್ರಮಾಣ ಪತ್ರವನ್ನು ನೀಡುತ್ತದೆ.

ತದನಂತರ ಈ ಎಲ್ಲಾ ದಾಖಲೆಗಳನ್ನು ಪೋಲೀಸ್ ಇಲಾಖೆಯು ಪರಿಶೀಲಿಸಿ ನಿರಾಕ್ಷೇಪಣಾ ಪತ್ರದೊಂದಿಗೆ, "ಎಂಬಾಲ್ಮಿಂಗ್" ನಡೆಸಲು ಮೃತದೇಹವನ್ನು ಬಿಟ್ಟುಕೊಡುತ್ತಾರೆ. ಶರೀರವನ್ನು ಆರೋಗ್ಯ ಕೇಂದ್ರದಲ್ಲಿ "ಎಂಬಾಲ್ಮಿಂಗ್" ನಡೆಸಿ, ಪ್ರಮಾಣ ಪತ್ರದೊಂದಿಗೆ ಪುನಃ ಭಾರತೀಯ ದೂತವಾಸ ಕಚೇರಿಗೆ ತೆರಳಿ ಎಲ್ಲಾ ದಾಖಲೆಗಳನ್ನು ಮರು ಪರಿಶೀಲನೆಗೆ ನೀಡಿ ಪ್ರಮಾಣ ಪತ್ರಕ್ಕೆ ರಾಯಭಾರಿ ಕಚೇರಿಯ ಅಧಿಕಾರಿಯ ಸಹಿ ಹಾಗೂ ಮುದ್ರೆಯನ್ನು ಪಡೆದುಕೊಳ್ಳಬೇಕು. ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿರುವ ಅಧಿಕಾರಿಗೆ ಎಲ್ಲಾ ದಾಖಲೆಗಳನ್ನು ನೀಡಿ ದೃಢೀಕರಿಸಿ, ನಂತರ ವಿಮಾನಯಾನ ಸಂಸ್ಥೆಯ ಅಧಿಕಾರಿಗಳಿಗೆ ಈ ಎಲ್ಲಾ ಪತ್ರಗಳೊಂದಿಗೆ ಕಾರ್ಗೋ ಬುಕ್ಕಿಂಗ್ ಹಾಗೂ ಮೃತದೇಹವನ್ನು ಊರಿಗೆ ಕೊಂಡೊಯ್ಯುವ ವ್ಯಕ್ತಿಯ ಟಿಕೆಟ್ ದಾಖಲೆಗಳನ್ನು ನೀಡಬೇಕಾಗುತ್ತದೆ. ಈ ಎಲ್ಲಾ ಕಾರ್ಯವಿಧಾನಗಳನ್ನು ಪೂರೈಸಲು ಒಂದಕ್ಕಿಂತ ಹೆಚ್ಚು ದಿನಗಳು ತಗಲುತ್ತದೆ. ವಾರಾಂತ್ಯದಲ್ಲೇನಾದರೂ ಮೃತಪಟ್ಟಲ್ಲಿ ಕನಿಷ್ಠ 4-5 ದಿನಗಳು ತಗಲುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ನಾಸಿರ್ ಕಾರಾಜೆ ಹೇಳುತ್ತಾರೆ.

ಯುಎಇಯಲ್ಲಿ ಸರಕಾರಿ ಕಚೇರಿಗಳ ಕೆಲಸದ ಸಮಯ ಅಪರಾಹ್ನ 2:30 ಕ್ಕೆ ಕೊನೆಗೊಳ್ಳುವುದರಿಂದ, ಈ ಎಲ್ಲಾ ಪ್ರಕ್ರಿಯೆಗಳು ನಡೆಸುವಾಗ ಹೆಚ್ಚು ಸಮಯ ತಗಲಿದರೆ ಕನಿಷ್ಠ 2-3 ದಿವಸಗಳ ಕಾಲ ಅನಿವಾಸಿಗಳು ತಮ್ಮ ಕೆಲಸಗಳಿಗೆ ಗೈರು ಹಾಜರಾಗಿ ಇದರ ಹಿಂದೆ ಅಲೆಯಬೇಕಾಗುತ್ತದೆ. ಈ ಎಲ್ಲಾ ಕೆಲಸಗಳು ಮುಗಿದು ಮೃತ ಶರೀರವನ್ನುಊರಿಗೆ ತಲುಪಿಸಲು ಕನಿಷ್ಠ 2ರಿಂದ 3 ದಿವಸಗಳು ಬೇಕಾಗುತ್ತದೆ. ಇಷ್ಟೆಲ್ಲಾ ಕೆಲಸಗಳಿರುವಾಗ ಕರಿಪ್ಪುರಂನ ಆರೋಗ್ಯಾಧಿಕಾರಿ ಹೊರಡಿಸಿರುವ ಆದೇಶ ಅನಿವಾಸಿ ಭಾರತೀಯರನ್ನು ಸಂಕಷ್ಟಕ್ಕೀಡು ಮಾಡಿದೆ ಎಂದವರು ಹೇಳಿದ್ದಾರೆ.

ಆದ್ದರಿಂದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೂಡಲೇ ಮಧ್ಯ ಪ್ರವೇಶಿಸಿ ಈ ಆದೇಶವನ್ನು ಮರುಪರಿಶೀಲಿಸಿ ಅನಿವಾಸಿ ಭಾರತೀಯರ ಸಮಸ್ಯೆಗೆ ಸ್ಪಂದಿಸಬೇಕು. ಸರಕಾರಗಳೊಂದಿಗೆ ಸಮಾಲೋಚನೆ ನಡೆಸದೆ ಸರ್ವಾಧಿಕಾರ ಪ್ರದರ್ಶಿಸಿದ ಅಧಿಕಾರಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ನಾಸಿರ್ ಕಾರಾಜೆ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X