Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಸಂಜೋತಾ ರೈಲು ಸ್ಫೋಟ ಪ್ರಕರಣದಲ್ಲಿ ಪಾಕ್...

"ಸಂಜೋತಾ ರೈಲು ಸ್ಫೋಟ ಪ್ರಕರಣದಲ್ಲಿ ಪಾಕ್ ಪ್ರಜೆಯ ಪಾತ್ರವಿಲ್ಲ"

ವಾರ್ತಾಭಾರತಿವಾರ್ತಾಭಾರತಿ10 July 2017 6:59 PM IST
share
ಸಂಜೋತಾ ರೈಲು ಸ್ಫೋಟ ಪ್ರಕರಣದಲ್ಲಿ ಪಾಕ್ ಪ್ರಜೆಯ ಪಾತ್ರವಿಲ್ಲ

ಹೊಸದಿಲ್ಲಿ, ಜು.10: ಸಂಜೋತಾ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಲಾಗಿದ್ದ ಪಾಕ್ ಪ್ರಜೆ ಅಝ್ಮತ್ ಅಲಿಯನ್ನು ಹಿರಿಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ಬಿಡುಗಡೆ ಮಾಡಲಾಗಿದೆ ಎಂದು ನಿವೃತ್ತ ರೈಲ್ವೇ ಪೊಲೀಸ್ ಅಧಿಕಾರಿಯೋರ್ವರು ನ್ಯಾಯಾಲಯದ ಎದುರು ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಹೇಳಿಕೆ ನೀಡಿರುವ ಓರ್ವ ಹಿರಿಯ ಅಧಿಕಾರಿ, ಸ್ಫೋಟ ಪ್ರಕರಣದಲ್ಲಿ ಅಲಿ ಒಳಗೊಂಡಿರಲಿಲ್ಲ ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಾಷ್ಟ್ರೀಯ ತನಿಖಾ ಸಮಿತಿ(ಎನ್‌ಐಎ), ಪ್ರಕರಣದ ವಿಚಾರಣೆ ನಡೆಯುತ್ತಿರುವ ಕಾರಣ ನ್ಯಾಯಾಲಯ ಸೂಚಿಸಿದರೆ ಮಾತ್ರ ಹೊಸ ಹೇಳಿಕೆಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದೆ.

 2007ರ ಫೆ.19ರಂದು ಸಂಜೋತಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಸ್ಫೋಟ ಸಂಭವಿಸಿದ್ದು , ಸುಳ್ಳು ದಾಖಲೆಪತ್ರದ ಮೂಲಕ ಭಾರತಕ್ಕೆ ಅಕ್ರಮ ಪ್ರವೇಶಿಸಿದ ಆರೋಪದಲ್ಲಿ ಅದೇ ವರ್ಷದ ಮಾರ್ಚ್ 1ರಂದು ಪಾಕ್ ಪ್ರಜೆ ಅಲಿಯನ್ನು ಪಂಜಾಬ್ ಪೊಲೀಸರು ಬಂಧಿಸಿದ್ದರು. 14 ದಿನ ತನಿಖೆ ನಡೆಸಿದ ಬಳಿಕ ಆತನನ್ನು ಬಿಡುಗಡೆಗೊಳಿಸಲಾಗಿತ್ತು.

ದೇಶದ ನೆಲದಲ್ಲಿ ನಡೆದ ಅತ್ಯಂತ ಭಯಾನಕ ದಾಳಿಯಲ್ಲಿ ಒಳಗೊಂಡಿದ್ದ ಆರೋಪಿಯನ್ನು ಭಾರತೀಯ ಅಧಿಕಾರಿಗಳು ಕೇವಲ 14 ದಿನದಲ್ಲೇ ಬಿಡುಗಡೆಗೊಳಿಸಿರುವುದು ಹೇಗೆಂದು ಕುಟುಕು ಕಾರ್ಯಾಚರಣೆಯಲ್ಲಿ ಬಹಿರಂಗಗೊಂಡಿದೆ ಎಂದು ಖಾಸಗಿ ಟಿವಿ ವಾಹಿನಿಯೊಂದರಲ್ಲಿ ಸುದ್ದಿ ಪ್ರಸಾರವಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ಐಪಿಎಸ್ ಅಧಿಕಾರಿ ಭಾರ್ತಿ ಅರೋರ, ಸೂಕ್ತ ತನಿಖೆಯ ಬಳಿಕ ಆತ ನಿರ್ದೋಷಿ ಎಂದು ತಿಳಿದುಬಂದಿದ್ದು ಆತನನ್ನು ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಟಿವಿ ಚಾನೆಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

2010ರಲ್ಲಿ ಬಂಧಿಸಲ್ಪಟ್ಟಿದ್ದ ಅಸೀಮಾನಂದ ಸಂಜೋತಾ ರೈಲು ಸ್ಫೋಟ ಪ್ರಕರಣದಲ್ಲಿ ತನ್ನ ಪಾತ್ರ ಇರುವುದಾಗಿ ಒಪ್ಪಿಕೊಂಡ ಬಳಿಕ ಈ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಗಿತ್ತು. ಅಸೀಮಾನಂದ ಸೇರಿದಂತೆ ಎಂಟು ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ಪ್ರಕರಣದಲ್ಲಿ 299 ಸಾಕ್ಷಿಗಳಿದ್ದು ಇವರಲ್ಲಿ ಹೆಚ್ಚಿನವರನ್ನು ವಿಚಾರಣೆ ಮಾಡಲಾಗಿದೆ. ಇನ್ನು ಕೆಲವು ಸರಕಾರಿ ಅಧಿಕಾರಿಗಳು ಹಾಗೂ 13 ಪಾಕಿಸ್ತಾನದ ಸಾಕ್ಷಿಗಳ ವಿಚಾರಣೆ ಬಾಕಿಯಿದೆ. ಜುಲೈ 4ರಂದು ವಿಚಾರಣೆಗೆ ಹಾಜರಾಗುವಂತೆ 13 ಪಾಕ್ ಪ್ರಜೆಗಳಿಗೆ ಸಮನ್ಸ್ ಜಾರಿಯಾಗಿತ್ತು. ಆದರೆ ಈ ಸಮನ್ಸ್ ಜಾರಿಗೊಳಿಸಲು ಮತ್ತು ಇವರನ್ನು ವಿಚಾರಣೆಗೆ ಹಾಜರಾಗಲು ಭಾರತಕ್ಕೆ ಕಳುಹಿಸಬೇಕೇ ಎಂಬುದನ್ನು ನಿರ್ಧರಿಸಲು ನಾಲ್ಕು ತಿಂಗಳ ಕಾಲಾವಕಾಶ ಬೇಕೆಂದು ಪಾಕಿಸ್ತಾನ ಉತ್ತರಿಸಿತ್ತು. ವಿಚಾರಣೆ ಈಗ ಮುಂದುವರಿದ ಸ್ಥಿತಿಯಲ್ಲಿದ್ದು ಪಾಕ್ ಸಾಕ್ಷಿಗಳು ಅತ್ಯಗತ್ಯವಲ್ಲ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X