Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಪರೂಪದ ಕಾಯಿಲೆಗೆ ತುತ್ತಾಗಿರುವ...

ಅಪರೂಪದ ಕಾಯಿಲೆಗೆ ತುತ್ತಾಗಿರುವ ವಿದ್ಯಾರ್ಥಿ: ಚಿಕಿತ್ಸೆಗೆ ಆರ್ಥಿಕ ನೆರವು ನೀಡಲು ಮನವಿ

ವಾರ್ತಾಭಾರತಿವಾರ್ತಾಭಾರತಿ10 July 2017 8:24 PM IST
share
ಅಪರೂಪದ ಕಾಯಿಲೆಗೆ ತುತ್ತಾಗಿರುವ ವಿದ್ಯಾರ್ಥಿ: ಚಿಕಿತ್ಸೆಗೆ ಆರ್ಥಿಕ ನೆರವು ನೀಡಲು ಮನವಿ

ಉಡುಪಿ ಜು.5: ಶರೀರದಲ್ಲಿ ಕೆಂಪು ರಕ್ತಕಣಗಳ ಉತ್ಪತ್ತಿ ನಿಯಮಿತವಾಗಿಲ್ಲದ ‘ಥಲಸ್ಸೇಮಿಯಾ’ ಎಂಬ ಅತಿ ವಿರಳ ಖಾಯಿಲೆಗೆ ಒಳಗಾಗಿರುವ ಉಡುಪಿಯ ಟ್ರಿನಿಟಿ ಶಾಲೆಯ 5ನೆ ತರಗತಿಯ ವಿದ್ಯಾರ್ಥಿ ಮಿಹಿರ್‌ನ ಚಿಕಿತ್ಸೆ ಗಾಗಿ ಆರ್ಥಿಕ ನೆರವು ನೀಡುವಂತೆ ಮಣಿಪಾಲದಲ್ಲಿ ವಾಸವಾಗಿರುವ ತಾಯಿ ಸುಜಾತ ಬ್ಯಾನರ್ಜಿ ದಾನಿಗಳಲ್ಲಿ ಮನವಿ ಮಾಡಿದ್ದಾರೆ.

ಪುಟ್ಟ ಮಗುವಾಗಿರುವಾಗಲೇ ತಂದೆಯನ್ನು ಕಳೆದುಕೊಂಡ ಮಿಹಿರ್ ಬಳಿಕ ಇದೇ ಖಾಯಿಲೆಗೆ ತುತ್ತಾಗಿದ್ದ ತನ್ನ ಅಣ್ಣನನ್ನೂ ಕಳೆದುಕೊಂಡಿದ್ದಾನೆ. ಇದೀಗ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿರುವ ತಾಯಿ ಸುಜಾತ ಅವರ ಆದಾಯವೊಂದೇ ಈ ಕುಟುಂಬಕ್ಕೆ ಆಸರೆಯಾಗಿದೆ.

ಬಾಲಕನಿಗೆ ಅಸ್ಥಿಮಜ್ಜೆಯ ಬದಲಾವಣೆ ಚಿಕಿತ್ಸೆಯನ್ನು ವೈದ್ಯರು ಸೂಚಿಸಿದ್ದು, ಅದಕ್ಕೆ ಸುಮಾರು 30 ಲಕ್ಷ ರೂ.ಗಳ ಅವಶ್ಯಕತೆ ಇದೆ. ಇದಕ್ಕಾಗಿ ತಾಯಿ ಸುಜಾತ ತನ್ನ ಮಗನನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಪತಿ, ಮಗನನ್ನು ಕಳೆದುಕೊಂಡ ಸುಜಾತ, ಇದೀಗ ಇನ್ನೋರ್ವ ಮಗ ಕೂಡ ಅದೇ ಕಾಯಿಲೆಗೆ ತುತ್ತಾಗಿರುವುದರಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಾಗಾಗಿ ಅವರು ದಾನಿಗಳ ನೆರವನ್ನು ಕೋರಿದ್ದಾರೆ.

ಬಾಲಕನ ಚಿಕಿತ್ಸೆಗಾಗಿ ಹಣ ಹೊಂದಿಸಲು ತೀರಾ ಕಷ್ಟ ಪಡುತ್ತಿರುವ ತಾಯಿ ಸುಜಾತ ಬ್ಯಾನರ್ಜಿ ಅವರಿಗೆ ಸಹಾಯ ಮಾಡುವ ದಾನಿಗಳು ಅವರನ್ನು ನೇರವಾಗಿ ಮೊಬೈಲ್- 08758511759ರಲ್ಲಿ ಸಂಪರ್ಕಿಸಬಹುದು.

ವಿಳಾಸ- 16-164 ಡಿ, ಶ್ರೀಕೃಪಾ, 11ನೆ ಕ್ರಾಸ್, ಎಎಲ್‌ಎನ್ ಲೇಔಟ್ ಮಣಿಪಾಲ- 5766104.

ಬ್ಯಾಂಕ್ ವಿವರ: ಸುಜಾತ ಬ್ಯಾನರ್ಜಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ರೆಸಿಡೆನ್ಸಿ ರೋಡ್ ಶಾಖೆ, ಬೆಂಗಳೂರು, ಅಕೌಂಟ್ ನಂಬರ್- 20014052193, ಐಎಫ್‌ಎಸ್‌ಸಿ ಕೋಡ್- ಎಸ್‌ಬಿಐಎನ್0008598 ಇದಕ್ಕೂ ಹಣ ಕಳುಹಿಸಬಹುದು.

ಜೇಸಿಐ ನೆರವು: ಈ ವಿಷಯ ತಿಳಿದ ಜೇಸಿಐ ಉಡುಪಿ-ಇಂದ್ರಾಳಿ ಸ್ಥಾಪಕ ಮನೋಜ್ ಕಡಬ ಯುವ ಜೇಸಿ ವಿಭಾಗದ ಅಧ್ಯಕ್ಷೆ ಅನುಶ್ರೀ ಮತ್ತು ತಂಡ ಮಣಿಪಾಲದ ಆಸುಪಾಸಿನಲ್ಲಿ ಒಂದು ದಿನ ಮತ್ತು ಪುತ್ತೂರಿನಲ್ಲಿ ನಡೆದ ಸಿಂಚನ ಯುವಜೇಸಿ ಸಮ್ಮೇಳನದಲ್ಲಿ ದೇಣಿಗೆ ಸಂಗ್ರಹಿಸಿದೆ.

ಇದರಿಂದ ಸಂಗ್ರಹವಾದ ಒಟ್ಟು 23,776 ರೂ. ದೇಣಿಗೆಯನ್ನು ಘಟಕಾಧ್ಯಕ್ಷೆ ಜೇಸಿ ಶೆರ್ಲಿ ಮನೋಜ್ ಮತ್ತು ಉಪಾಧ್ಯಕ್ಷೆ ಜೇಸಿ ಶೆಬಾ ಮನೋಜ್ ಉಪಸ್ಥಿತಿಯಲ್ಲಿ ಬಾಲಕನ ತಾಯಿಗೆ ಇತ್ತೀಚೆಗೆ ಹಸ್ತಾಂತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X