Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತವು ‘ಟಿಬೆಟ್ ಕಾರ್ಡ್’ ಬಳಸಿದಲ್ಲಿ...

ಭಾರತವು ‘ಟಿಬೆಟ್ ಕಾರ್ಡ್’ ಬಳಸಿದಲ್ಲಿ ಗಂಭೀರ ಪರಿಣಾಮ: ಚೀನಿ ಮಾಧ್ಯಮ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ10 July 2017 9:41 PM IST
share
ಭಾರತವು ‘ಟಿಬೆಟ್ ಕಾರ್ಡ್’  ಬಳಸಿದಲ್ಲಿ ಗಂಭೀರ ಪರಿಣಾಮ: ಚೀನಿ ಮಾಧ್ಯಮ ಎಚ್ಚರಿಕೆ

ಬೀಜಿಂಗ್,ಜು.10: ಸಿಕ್ಕಿಂ ಗಡಿಯಲ್ಲಿ ಸೇನಾ ಉದ್ವಿಗ್ನತೆ ಭುಗಿಲೆದ್ದಿರುವ ನಡುವೆಯೇ ಬೀಜಿಂಗ್ ಮೇಲೆ ಒತ್ತಡ ಹೇರಲು ಹೊಸದಿಲ್ಲಿಯು ಒಂದು ವೇಳೆ ಟಿಬೆಟ್ ಕಾರ್ಡ್ ಬಳಸಿದ್ದೇ ಆದಲ್ಲಿ ಅದು ತಾನಾಗಿಯೇ ತನ್ನನ್ನು ಸುಟ್ಟುಕೊಂಡಂತೆ ಎಂದು ಚೀನಾದ ಸರಕಾರಿ ಸ್ವಾಮ್ಯದ ಸುದ್ದಿಸಂಸ್ಥೆಯೊಂದು ಎಚ್ಚರಿಕೆ ನೀಡಿದೆ.

ಲಡಾಖ್‌ನ ಸರೋವರವೊಂದರ ತೀರದಲ್ಲಿ ಟಿಬೆಟ್‌ನ ರಾಷ್ಟ್ರಧ್ವಜವನ್ನು ಹಾರಿಸಲಾಗಿದೆಯೆಂದು ಭಾರತದ ಕೆಲವು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಉಲ್ಲೇಖಿಸಿ ಅದು ಈ ಪ್ರಚೋದನಕಾರಿ ಲೇಖನವನ್ನು ಪ್ರಕಟಿಸಿದೆ.

 ಟಿಬೆಟ್‌ನ ದೇಶಭ್ರಷ್ಟ ಸರಕಾರವು ಅಂಗೀಕರಿಸಿರುವ ಸ್ವಾತಂತ್ಯದ ಸಂಕೇತವಾದ ಟಿಬೆಟಿಯನ್ ರಾಷ್ಟ್ರಧ್ವಜವನ್ನು ಚೀನಾ-ಭಾರತ ಗಡಿಯ ಸಮೀಪದಲ್ಲಿರುವ, ಪಾಂಗೊಂಗ್ ಸರೋವರದ ಬಳಿ ಹಾರಿಸಲಾಗಿದೆಯೆಂದು ಭಾರತೀಯ ಮಾಧ್ಯಮಗಳು ವರದಿ ಮಾಡಿರುವುದಾಗಿ ಚೀನಾದ ಸರಕಾರಿ ಮುಖವಾಣಿ ಪತ್ರಿಕೆ ‘ಗ್ಲೋಬಲ್ ಟೈಮ್ಸ್’ ತಿಳಿಸಿದೆ.

ಲಡಾಖ್‌ನಲ್ಲಿರುವ ಪಾಂಗೊಂಗ್ ಸರೋವದ ಮೂಲಕ ಗಡಿ ನಿಯಂತ್ರಣ ರೇಖೆ ಹಾದುಹೋಗುವುದರಿಂದ ಅದು ವ್ಯೆಹಾತ್ಮಕ ದೃಷ್ಟಿಯಿಂದ ಮಹತ್ವದ್ದಾಗಿದೆ. ಉತ್ತರಭಾರತದಲ್ಲಿರುವ ದೇಶಭ್ರಷ್ಟ ಟಿಬೆಟಿಯನ್ ಸರಕಾರವು ಈ ಪ್ರದೇಶದಲ್ಲಿ ತನ್ನ ಧ್ವಜವನ್ನು ಹಾರಿಸಿರುವುದು ಇದೇ ಮೊದಲ ಸಲ ಎಂದು ಗ್ಲೋಬಲ್ ಟೈಮ್ಸ್ ವರದಿಯಲ್ಲಿ ತಿಳಿಸಿದೆ. ಒಂದು ವೇಳೆ ಹೊಸದಿಲ್ಲಿಯ, ಟಿಬೆಟಿಯನ್ ದೇಶಭ್ರಷ್ಟರ ಧ್ವಜಾರೋಹಣದ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದ್ದಲ್ಲಿ ಅದು ತನ್ನನ್ನು ತಾನೇ ಸುಟ್ಟುಕೊಂಡಂತೆ ಎಂದು ಪತ್ರಿಕೆ ಕಿಡಿಕಾರಿದೆ. ಗಡಿವಿವಾದಗಳು ಹಾಗೂ ಟಿಬೆಟ್ ಪ್ರಶ್ನೆಯು ಚೀನಾದ ಪ್ರಧಾನ ಹಿತಾಸಕ್ತಿಗಳಾಗಿದ್ದು, ಇಂತಹ ಯಾವುದೇ ಪ್ರಚೋದನೆಗಳಿಗೆ ಅದು ಬಾಗಲಾರದು ಎಂದು ಗ್ಲೋಬಲ್ ಟೈಮ್ಸ್ ಹೇಳಿದೆ.

ಈಗ ನಡೆಯುತ್ತಿರುವ ಗಡಿವಿವಾದವನ್ನು ಗಮನಕ್ಕೆ ತೆಗೆದುಕೊಂಡು ಭಾರತ ಸರಕಾರವು ಉದ್ವಿಗ್ನತೆ ಉಲ್ಬಣಿಸದಂತೆ ವಿವೇಚನೆಯಿಂದ ಕಾರ್ಯಾ ಚರಿಸಬೇಕಾಗಿದೆ. ಟಿಬೆಟಿಯನ್ ದೇಶಭ್ರಷ್ಟರನ್ನು ಹಾಗೂ ಭಾರತ ನೆಲದಲ್ಲಿ ಅವರು ನಡೆಸುತ್ತಿರುವ ಚೀನಾವಿರೋಧಿ ಚಟುವಟಿಕೆಗಳನ್ನು ನಿಯಂ ತ್ರಿಸುವುದು ಅದರ ಜವಾಬ್ದಾರಿಯಾಗಿದೆ’’ ಎಂದು ಪತ್ರಿಕೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X