ಜು.14: ನೀರಿಗಾಗಿ ಅರಣ್ಯ ಆಂದೋಲನ
ಮಂಗಳೂರು, ಜು.10: ರಾಜ್ಯ ಅರಣ್ಯ ಇಲಾಖೆ, ದ.ಕ. ಜಿಲ್ಲಾಡಳಿತ, ದ.ಕ.ಜಿಪಂ., ಮಂಗಳೂರು ಮನಪಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ರಾಷ್ಟ್ರೀಯ ಸೇವಾಯೋಜನೆ ವಿಶ್ವವಿದ್ಯಾನಿಲಯ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಜು.14ರಂದು ಬೆಳಗ್ಗೆ 10ಕ್ಕೆ ಮಂಗಳೂರು ಪುರಭವನದಲ್ಲಿ ನೀರಿಗಾಗಿ ಅರಣ್ಯ ಆಂದೋಲನ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ವನಮಹೋತ್ಸವದ ಬೀಜದುಂಡೆ ತಯಾರಿಕೆ, ಬಿತ್ತೋತ್ಸವ, ಸಸಿ ನೆಡುವುದು, ಪರಿಸರ ಜಾಥಾ, ಮಾನವ ಸರಪಳಿ, ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಜರಗಲಿದೆ. ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





