ಕ್ಯಾಬ್ ಚಾಲಕನ ದರೋಡೆ ಪ್ರಕರಣ: ಇಬ್ಬರ ಬಂಧನ
ಬೆಂಗಳೂರು, ಜು.11: ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ಕೆಂಗೇರಿದ ನಾಗೇಶ್ ಮತ್ತು ಕಾರ್ತಿಕ್ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ನಾಲ್ಕು ಮಂದಿ ದುಷ್ಕರ್ಮಿಗಳು ಲಗ್ಗೆರೆಯಿಂದ ಹೆಬ್ಬಾಳಕ್ಕೆ ಮೆರು ಕ್ಯಾಬ್ ಬುಕ್ ಮಾಡಿಕೊಂಡು ಹೊರಟು ಮಾರ್ಗ ಮಧ್ಯೆ ಚಾಲಕ ಹರೀಶ್ ಮೇಲೆ ಹಲ್ಲೆ ನಡೆಸಿ ಮಾರಕಾಸ್ತ್ರಗಳಿಂದ ಬೆದರಿಸಿ ಹಣ, ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದರು.
Next Story





