ಅಪಾರ್ಟ್‌ಮೆಂಟ್‌ನಲ್ಲಿ ಕಳವು
ಬೆಂಗಳೂರು, ಜು.11: ಅಪಾರ್ಟ್‌ಮೆಂಟ್‌ನ ಮನೆಯೊಂದರ ಬಾಗಿಲು ಮುರಿದು ಒಳನುಗ್ಗಿರುವ ಚೋರರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಪ್ರಕರಣ ಚಂದ್ರಲೇಔಟ್ ನಿಸರ್ಗ ಲೇಔಟ್‌ನಲ್ಲಿ ನಡೆದಿದೆ.
ನಿಸರ್ಗ ಲೇಔಟ್‌ನ ಸ್ಕೈಲೈನ್ ಸಿಟಿ ಅಪಾರ್ಟ್‌ಮೆಂಟ್‌ನ ಸೆಕ್ಯೂರಿಟಿ ಗಾರ್ಡ್ ರಾಜೀವ್ ಎಂಬುವರು ಸೋಮವಾರ ರಾತ್ರಿ ಕುಟುಂಬ ಸಮೇತರಾಗಿ ಹೊರ ಹೋಗಿದ್ದಾರೆ. ಆ ಸಂದರ್ಭದಲ್ಲಿ ಅಪಾರ್ಟ್‌ಮೆಂಟ್‌ಗೆ ನುಗ್ಗಿರುವ ಚೋರರು 20 ಸಾವಿರ ನಗದು ಮತ್ತು ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಲೇಔಟ್ ಠಾಣೆ ಪೊಲೀಸರು, ಆರೋಪಿಗಳಿಗಾಗಿ ಪತ್ತೆಕಾರ್ಯ ಮುಂದುವರೆಸಿದ್ದಾರೆ.
Next Story





