ಬಂಟ್ವಾಳ ಸರ್ಕಲ್ ಇನ್‌ಸ್ಪೆಕ್ಟರ್ ಆಗಿ ಬ್ರಿಜೇಶ್ ಮ್ಯಾಥ್ಯೂ ನೇಮಕ
.jpg)
ಬಂಟ್ವಾಳ, ಜು. 11: ಬಂಟ್ವಾಳ ನೂತನ ಸರ್ಕಲ್ ಇನ್‌ಸ್ಪೆಕ್ಟರ್ ಆಗಿ ಬ್ರಿಜೇಶ್ ಮ್ಯಾಥ್ಯೂರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಚಿಕ್ಕಮಗಳೂರು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಎಸ್ಸೈ ಆಗಿದ್ದ ಬ್ರಿಜೇಶ್ ಮ್ಯಾಥ್ಯೂರನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಆಡಳಿತಾತ್ಮಕ ಕಾರಣಗಳಿಂದ ಖಾಲಿ ಇರುವ ಬಂಟ್ವಾಳ ವೃತ್ತ ನಿರೀಕ್ಷಕ ಹುದ್ದೆಗೆ ವರ್ಗಾಹಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಲಾಗಿದೆ.
ಜುಲೈ 12ರಂದು ಮಧ್ಯಾಹ್ನದಿಂದ ಅವರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.
Next Story





