ಜಿಪಂ ಅಧ್ಯಕ್ಷರಿಂದ ಹಾಸ್ಟೆಲ್‌ಗೆ ದಿಢೀರ್ ಭೇಟಿ, ಪರಿಶೀಲನೆ
ಉಡುಪಿ, ಜು.12: ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಜು.11ರ ಮಂಗಳವಾರ ಕುಂದಾಪುರ ತಾಲೂಕಿನ ಹೇರಂಜಾಲು ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಶೈಕ್ಷಣಿಕ ಅವ್ಯವಸ್ಥೆಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ವಸತಿ ನಿಲಯದ ಮಕ್ಕಳು ವಸತಿ ನಿಲಯದಲ್ಲಿರುವ ಅನೇಕ ಸಮಸ್ಯೆಗಳ ಕುರಿತು ಅಧ್ಯಕ್ಷರಲ್ಲಿ ದೂರಿದರು. ಕುಡಿಯುವ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಹಾಗೂ ರಾತ್ರಿ ವೇಳೆ ಬೆಳಕಿನ ವ್ಯವಸ್ಥೆ ಮಾಡುವಂತೆ ಹಾಗೂ ಇಲ್ಲಿನ ಇನ್ನೂ ಅನೇಕ ಸಮಸ್ಯೆಗಳನ್ನು ಬಗೆಹರಿಸುವಂತೆ ಅವರು ಅಧ್ಯಕ್ಷರನ್ನು ಕೋರಿದರು.
Next Story





