ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ವಿಶೇಷ ಅಭಿಯಾನ
ಉಡುಪಿ, ಜು.12: ಈ ಸಂಬಂಧ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ 5 ವಿಧಾನಸಬಾ ಕ್ಷೇತ್ರಗಳ ಮತದಾರರ ಪಟ್ಟಿಗೆ 18ರಿಂದ 21 ವಯಸ್ಸಿನ ಯುವಕ/ಯುವತಿ ಯರ ಹೆಸರನ್ನು ಹೊಸದಾಗಿ ಸೇರ್ಪಡೆಗೊಳಿಸಲು ಜು.1ರಿಂದ 30ರವರೆಗೆ ಉಡುಪಿ ಜಿಲ್ಲೆಯಾದ್ಯಂತ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಒಟ್ಟು 1,059ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮತಗಟ್ಟೆ ಅಧಿಕಾರಿಗಳು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸುವರು. ಅರ್ಹ ನಾಗರಿಕರು ತಮ್ಮ ವಿಧಾನಸಬಾ ಕ್ಷೇತ್ರದ ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಳಿಸಲು ನಮೂನೆ 6ರಲ್ಲಿ ಅರ್ಜಿ ಭರ್ತಿ ಮಾಡಿ ಸೂಕ್ತ ದಾಖಲೆ ಗಳೊಂದಿಗೆ ಸಂಬಂಧಪಟ್ಟ ಮತಗಟ್ಟೆ ಅಧಿಕಾರಿಗಳಿಗೆ ಅಥವಾ ತಹಶೀಲ್ದಾರರ ಕಚೇರಿಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story





