ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ
ಉಡುಪಿ, ಜು.12: ಭಾರತೀಯ ಆಡಳಿತ ಸೇವೆ (ಐಎಎಸ್) ಹಾಗೂ ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಆಸಕ್ತಿಯನ್ನು ಹೊಂದಿರುವ ಉಡುಪಿ ಜಿಲ್ಲೆಯ ಅ್ಯರ್ಥಿಗಳಿಗೆ ತರಬೇತಿ ನೀಡಲು ಯೋಜಿಸಲಾಗಿದೆ.
ಈ ಪರೀಕ್ಷೆಗಳಿಗೆ ನಿಗದಿಪಡಿಸಲಾಗಿರುವ ಪಠ್ಯಗಳನ್ನು ಬೋಧಿಸಲು, ಆಸಕ್ತಿ ಹೊಂದಿದ ಬೋಧಕರು ಅಥವಾ ಸಂಸ್ಥೆಗಳ ಸಹಯೋಗದೊಂದಿಗೆ ತರಬೇತಿ ಆಯೋಜಿಸಲು ತೀರ್ಮಾನಿಸಲಾಗಿದೆ. ಆಸಕ್ತರು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಮತ್ತು ಬೋಧನಾ ವಿಷಯಗಳ ವಿವರಗಳನ್ನು ಜು.31 ರೊಳಗೆ -dmudupi@yahoo.com -ಗೆ ಕಳುಹಿಸುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





