ಬಿಜೆಪಿಯವರಿಗೆ ಶಾಂತಿ ನೆಲೆಸುವುದು ಬೇಕಿಲ್ಲ: ಕಾನೂನು ಸಚಿವ ಜಯಚಂದ್ರ

ಬೆಂಗಳೂರು, ಜು. 13: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಜನರನ್ನು ಪ್ರಚೋದನೆ ಮಾಡುತ್ತಿದ್ದಾರೆಂದು ಕಾನೂನು ಟಿ.ಬಿ.ಜಯಚಂದ್ರ ಇಂದಿಲ್ಲಿ ಗಂಭೀರ ಆರೋಪ ಮಾಡಿದ್ದಾರೆ.
ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೋಮು ಗಲಭೆ ಪೀಡಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅಧ್ಯಕ್ಷತೆಯಲ್ಲಿ ಶಾಂತಿ ಸಭೆಗೆ ಬಿಜೆಪಿ ನಾಯಕರು ಬಹಿಷ್ಕರಿಸಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ಬಿಜೆಪಿಗೆ ಶಾಂತಿ ಬೇಕಿಲ್ಲ: ಶಾಂತಿ ಸಭೆಗೆ ಬಿಜೆಪಿ ಬಹಿಷ್ಕಾರ ಹಾಕಿರುವುದನ್ನು ನೋಡಿದರೆ ಆ ಪಕ್ಷಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ನೆಲೆಸುವುದು ಬೇಕಾಗಿಲ್ಲ. ಆ ಪಕ್ಷದ ನಾಯಕರುಗಳಿಗೆ ಅಭಿವೃದ್ಧಿ ಬೇಕಾಗಿಲ್ಲ. ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ಭಾವನೆಗಳನ್ನು ಕೆರಳಿಸುವುದೇ ಮಾನದಂಡವಾಗಿದೆ ಎಂದು ವಾಗ್ದಾಳಿ ನಡೆಸಿದರು.
Next Story





