ಚಿಕ್ಕಮಗಳೂರು, ಜು.13: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2017-18ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ಜಿಲ್ಲೆಯ ಅಲ್ಪಸಂಖ್ಯಾತರ ಜನರ ಆರ್ಥಿಕ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗಕ್ಕಾಗಿ ವಿವಿಧ ಸಾಲ- ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
www.kmdc.kar.nic.in ಸ್ವಯಂ ಉದ್ಯೋಗ, ಶ್ರಮ ಶಕ್ತಿ ಮೈಕ್ರೋಕ್ರೆಡಿಟ್, ಗಂಗಾ ಕಲ್ಯಾಣ, ಪಶುಸಂಗೋಪ ವಾಹನ ಖರೀದಿ ಪ್ರವಾಸಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆ.10 ಕೊನೆಯ ದಿನವಾಗಿದೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ವೆಬ್‌ಸೈಟ್ ಅಥವಾ ಅಥವಾ ದೂರವಾಣಿ ಸಂಖ್ಯೆ 08262-220443 ನ್ನು ಸಂಪರ್ಕಿಸಬಹುದಾಗಿದೆ.