"ಐಟಿ ವಲಯದಲ್ಲಿ ಉದ್ಯೋಗ ಭದ್ರತೆ ಇಲ್ಲ": ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಇಂಜಿನಿಯರ್

ಪುಣೆ, ಜು.13: ಪುಣೆಯ ವಿಮಾನಗರದಲ್ಲಿ 25ರ ಹರೆಯದ ಸಾಫ್ಟ್‌ವೇರ್ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದ್ದು, ಈತನ ಕೋಣೆಯಲ್ಲಿ ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಉದ್ಯೋಗ ಭದ್ರತೆಯಿಲ್ಲ ಎಂದು ಬರೆದಿರುವ ಚೀಟಿ ದೊರೆತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಯುವಕನನ್ನು ಆಂಧ್ರಪ್ರದೇಶದ ಗೋಪಿಕೃಷ್ಣ ಗುರುಪ್ರಸಾದ್ ಎಂದು ಗುರುತಿಸಲಾಗಿದೆ. ಈತ ವಾಸ್ತವ್ಯ ಹೂಡಿದ್ದ ಹೋಟೆಲ್‌ನಲ್ಲಿ ಈ ಘಟನೆ ನಡೆದಿದ್ದು ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಈತನನ್ನು ಆಸ್ಪತ್ರೆಗೆ ಸಾಗಿಸಿದರೂ ಆ ವೇಳೆಗಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಐಟಿ ವಲಯದಲ್ಲಿ ಉದ್ಯೋಗದ ಭದ್ರತೆ ಇಲ್ಲ. ನನ್ನ ಕುಟುಂಬದ ಬಗ್ಗೆ ನನಗೆ ಚಿಂತೆಯಾಗಿದೆ ಎಂದು ಆತ ಚೀಟಿಯಲ್ಲಿ ಬರೆದಿದ್ದ . ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬ ವರ್ಗದವರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





