ಹೊಟೇಲ್ ಸಿಬ್ಬಂದಿ ಆತ್ಮಹತ್ಯೆ
ಬೆಂಗಳೂರು, ಜು.13: ಖಾಸಗಿ ಹೊಟೇಲ್‌ನ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಇಲ್ಲಿನ ಉಪ್ಪಾರಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಂದ್ರಶೇಖರ್(35) ಆತ್ಮಹತ್ಯೆ ಮಾಡಿಕೊಂಡ ಹೊಟೇಲ್ ಸಿಬ್ಬಂದಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗಾಂಧಿನಗರದ ಹೊಟೇಲ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಚಂದ್ರಶೇಖರ್, ಬುಧವಾರ ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಆತ್ಮಹತ್ಯೆಗೆ ಕಾರಣ ಇನ್ನು ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದು, ಈ ಸಂಬಂಧ ಉಪ್ಪಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





