ಕಣಚೂರ್ ಸಮೂಹ ಸಂಸ್ಥೆಯ ಸ್ಥಾಪಕ ದಿನಾಚರಣೆ

ಮಂಗಳೂರು, ಜು. 13: ಕಣಚೂರ್ ಸಮೂಹ ಸಂಸ್ಥೆಯ ಸ್ಥಾಪಕ ದಿನಾಚರಣೆಯು ಗುರುವಾರ ಸಂಸ್ಥೆಯ ಕ್ಯಾಂಪಸ್ ಆಡಿಟೋರಿಯಂನಲ್ಲಿ ನಡೆಯಿತು.
ಸಂಸ್ಥೆಯ ಸ್ಥಾಪಕ ಹಾಜಿ ಯು.ಕೆ.ಮೋನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅವರು ಗಿಡ ನೆಡುವ ಮೂಲಕ ವನಮಹೋತ್ಸವ ಮತ್ತು ಸ್ಥಾಪಕರ ದಿನಾಚರಣೆಗೆ ಚಾಲನೆ ನೀಡಿದರು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಜೀವನದಲ್ಲಿ ಸಮಯವು ಅಮೂಲ್ಯವಾಗಿದ್ದು, ಅದಕ್ಕೆ ಬೆಲೆ ಕೊಟ್ಟು ಸಮಯವನ್ನು ಸದುಪಯೋಗಪಡಿಸಿ ಕೊಳ್ಳುವಂತೆ ಸಲಹೆ ನೀಡಿದರಲ್ಲದೆ, ಎಲ್ಲರೂ ಪರಿಶ್ರಮಪಟ್ಟು ಉತ್ತಮ ಪ್ರಜೆಗಳಾಗಿ ದೇಶಕ್ಕೆ ಕೊಡುಗೆ ನೀಡಬೇಕೆಂದರು.
ಹಾಜಿ ಯು.ಕೆ.ಮೋನು ಅವರನ್ನು ಇದೇ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಕಣಚೂರ್ ಇನ್ಸ್‌ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸೈನ್ಸಸ್‌ನ ಪ್ರೊ.ಇಕ್ಬಾಲ್ ಅಹ್ಮದ್ ಯು.ಟಿ. ಸ್ವಾಗತಿಸಿದರು.
ಕಣಚೂರ್ ಕಾಲೇಜ್ ಆಫ್ ಫಿಸಿಯೋಥೆರಪಿಯ ಪ್ರಾಂಶುಪಾಲ ಡಾ.ಮುಹಮ್ಮದ್ ಸುಹೇಲ್ ವಂದಿಸಿದರು. ಕಣಚೂರ್ ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ಉಪನ್ಯಾಸಕಿ ರಶ್ಮಿ ಬಿ.ಆರ್. ಕಾರ್ಯಕ್ರಮ ನಿರೂಪಿಸಿದರು.
ಕಣಚೂರ್ ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸ್ ನ ಪ್ರಾಂಶುಪಾಲ ಡಾ.ಎಚ್.ಎಸ್.ವಿರೂಪಾಕ್ಷ, ಸಹಾಯಕ ಪ್ರಾಂಶುಪಾಲ ಡಾ.ಶ್ರೀಶ ಖಂಡಿಗೆ, ಕಣಚೂರ್ ಇನ್ಸ್‌ಟಿಟ್ಯೂಟ್ ಆಫ್ ಅಲೈಡ್ ಸಯನ್ಸ್ ನ ಪ್ರಾಂಶುಪಾಲ ಡಾ.ವಿವಿಯನ್ ಡಿಸೋಜ, ಕಣಚೂರ್ ಕಾಲೇಜ್ ಆಫ್ ನರ್ಸಿಂಗ್ ಸಯನ್ಸ್ ನ ಪ್ರಾಂಶುಪಾಲ ಪ್ರೊ.ರೆನಿಲ್ಡ ಶಾಂತಿ ಲೋಬೊ, ಕಣಚೂರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯಕೀಯ ಅಧೀಕ್ಷಕಿ ಡಾ.ದೇವಿ ಪ್ರಸಾದ್, ಆಡಳಿತ ವೈದ್ಯಕೀಯ ಅಧಿಕಾರಿ ಡಾ.ರೋಹನ್ ಮೋನಿಸ್, ಕಣಚೂರ್ ಪಿಯು ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಹೇಮಲತಾ, ಕಣಚೂರ್ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲೆ ಆನಂದಿ ಕೆ., ಕಣಚೂರ್ ಪ್ರಿ ಸ್ಕೂಲ್‌ನ ಪ್ರಾಂಶುಪಾಲೆ ಲಿನೆಟ್ ಡಿಸೋಜಾ, ಕಾರ್ಯಾಲಯದ ಸಿಬ್ಬಂದಿ ವಿನ್ಫ್ರೆಡ್ ಫೆರ್ನಾಂಡಿಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಣಚೂರು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.







