ಮಧ್ಯಸ್ಥಿಕೆದಾರರಿಗೆ ತರಬೇತಿ
ಉಡುಪಿ, ಜು.13: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಬೆಂಗಳೂರು ಮಧ್ಯಸ್ಥಿಕೆ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಮತ್ತು ವಕೀಲರ ಸಂಘ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಧ್ಯಸ್ಥಿಕೆದಾರರಿಗೆ ಜಿಲ್ಲಾ ಮಟ್ಟದ ಮೂರು ದಿನಗಳ ತರಬೇತಿ ಕಾರ್ಯಾಗಾರ ಜು.14ರಂದು ಬೆಳಗ್ಗೆ 9:30ಕ್ಕೆ ಉಡುಪಿ ತಾಪಂ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವೆಂಕಟೇಶ ನಾಯ್ಕ ಟಿ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಎಚ್.ರತ್ನಾಕರ ಶೆಟ್ಟಿ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವೆಂಕಟೇಶ ನಾಯ್ಕ ಟಿ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಎಚ್. ರತ್ನಾಕರ ಶೆಟ್ಟಿ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
Next Story





